ಆದಿಕಾಂಡ 33:14 - ಪರಿಶುದ್ದ ಬೈಬಲ್14 ಆದ್ದರಿಂದ ನೀನು ಮುಂದಾಗಿ ಹೋಗು. ನಾನು ನಿನ್ನನ್ನು ನಿಧಾನವಾಗಿ ಹಿಂಬಾಲಿಸುವೆನು. ದನಕುರಿಗಳು ಮತ್ತು ಇತರ ಪಶುಗಳು ಸುರಕ್ಷಿತವಾಗಿರುವಂತೆಯೂ ನನ್ನ ಮಕ್ಕಳು ತುಂಬ ಆಯಾಸಗೊಳ್ಳದಂತೆಯೂ ನಾನು ಸಾಕಷ್ಟು ನಿಧಾನವಾಗಿ ಬಂದು ನಿನ್ನನ್ನು ಸೇಯೀರ್‌ನಲ್ಲಿ ಭೇಟಿಯಾಗುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತಾವು ದಯವಿಟ್ಟು ದಾಸನಿಗಿಂತಲು ಮುಂಚೆ ಹೊರಡಬಹುದು, ನಾನು ನನ್ನ ಮುಂದಿರುವ ಆಡುಕುರಿಗಳ ಹಾಗೂ ಮಕ್ಕಳ ನಡಿಗೆಗೆ ತಕ್ಕ ಹಾಗೆ ಮೆಲ್ಲಮೆಲ್ಲನೆ ನಡೆದು ನನ್ನೊಡೆಯರ ನಾಡಾದ ಎದೋಮಿಗೆ ಬರುತ್ತೇನೆ,” ಎಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೊರಡಬಹುದು. ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು. ಅಧ್ಯಾಯವನ್ನು ನೋಡಿ |