ಆದಿಕಾಂಡ 33:15 - ಪರಿಶುದ್ದ ಬೈಬಲ್15 ಅದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು. ಆದರೆ ಯಾಕೋಬನು, “ಅದು ನಿನ್ನ ದಯೆ. ಆದರೆ ಅಂಥ ಅಗತ್ಯವೇನೂ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಏಸಾವನು, “ಹಾಗಾದರೆ, ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟುಹೋಗುತ್ತೇನೆ,” ಎಂದನು. ಯಕೋಬನು, “ಏತಕ್ಕೆ, ಬೇಡಿ, ನನ್ನೊಡೆಯರ ದಯೆ ನನ್ನ ಮೇಲಿದ್ದರೆ ಸಾಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಏಸಾವನು - ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು - ಅದೇಕೆ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು. ಅಧ್ಯಾಯವನ್ನು ನೋಡಿ |