Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:17 - ಪರಿಶುದ್ದ ಬೈಬಲ್‌

17 ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇತ್ತ ಯಕೋಬನು ಪ್ರಯಾಣ ಬೆಳೆಸುತ್ತಾ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ಮಂದೆಗಳಿಗೋಸ್ಕರ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಈ ಕಾರಣ ಆ ಸ್ಥಳಕ್ಕೆ ‘ಸುಕ್ಕೋತ್’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಕೋಬನು ಪ್ರಯಾಣ ಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಚಪ್ಪರಗಳನ್ನೂ ಮಾಡಿಸಿದನು; ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯಾಕೋಬನು ಪ್ರಯಾಣಮಾಡಿ, ಸುಕ್ಕೋತಿಗೆ ಹೋಗಿ, ಮನೆಯನ್ನು ಕಟ್ಟಿಸಿಕೊಂಡನು. ಇದಲ್ಲದೆ ತನ್ನ ಪಶುಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದ್ದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:17
10 ತಿಳಿವುಗಳ ಹೋಲಿಕೆ  

ದೇವರು ತನ್ನ ಆಲಯದೊಳಗೆ ಹೀಗೆಂದನು: “ನಾನು ಅವರಿಗೆ ಶೆಕೆಮನ್ನು ಕೊಡುವೆನು; ಸುಕ್ಕೋತ್ ಕಣಿವೆಯನ್ನೂ ಅವರಿಗೆ ಕೊಡುವೆನು.


ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು.


ಆ ಪ್ರದೇಶವು ಬೇತ್‌ಹಾರಾಮ್, ಬೇತ್‌ನಿಮ್ರಾ, ಸುಕ್ಕೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಈ ಪ್ರದೇಶವು ಜೋರ್ಡನ್ ನದಿಯ ಪೂರ್ವ ಭಾಗದಲ್ಲಿತ್ತು. ಈ ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು.


ಗಿದ್ಯೋನನು ಸುಖೋತ್ ನಗರದ ಹಿರಿಯರಿಗೆ ಮರುಭೂಮಿಯ ಮುಳ್ಳುಗಳಿಂದಲೂ ಕುರುಚಲುಗಳಿಂದಲೂ ಹೊಡೆಸಿ ಶಿಕ್ಷಿಸಿದನು.


ಗಿದ್ಯೋನನು ಸುಖೋತ್ ಎಂಬ ನಗರವನ್ನು ಬಿಟ್ಟು ಪೆನೂವೇಲ್ ಎಂಬ ನಗರಕ್ಕೆ ಬಂದನು; ಆಹಾರಕ್ಕಾಗಿ ಸುಖೋತ್ ಜನರನ್ನು ಕೇಳಿದಂತೆ ಪೆನೂವೇಲಿನ ಜನರನ್ನೂ ಕೇಳಿದನು. ಆದರೆ ಪೆನೂವೇಲಿನ ಜನರು ಸಹ ಸುಖೋತಿನ ಜನರಂತೆಯೇ ಉತ್ತರಿಸಿದರು.


ಈ ವಸ್ತುಗಳನ್ನು ಮಾಡಲು ಉಪಯೋಗಿಸಿದ ಹಿತ್ತಾಳೆಯನ್ನು ಸೊಲೊಮೋನನು ತೂಕಹಾಕಲೇ ಇಲ್ಲ. ಯಾಕೆಂದರೆ ತೂಕ ಮಾಡಲಾಗದಷ್ಟು ವಸ್ತುಗಳು ಅಲ್ಲಿದ್ದವು. ಆದ್ದರಿಂದ ಹಿತ್ತಾಳೆಯ ಒಟ್ಟು ತೂಕವು ತಿಳಿಯಲೇ ಇಲ್ಲ. ಈ ವಸ್ತುಗಳನ್ನು ಸುಕ್ಕೋತ್ ಮತ್ತು ಚಾರೆತಾನ್‌ಗಳ ನಡುವೆ ಜೋರ್ಡನ್ ನದಿಯ ಹತ್ತಿರ ತಯಾರಿಸಲು ರಾಜನು ಆಜ್ಞಾಪಿಸಿದನು. ಅವರು ಹಿತ್ತಾಳೆಯನ್ನು ಕರಗಿಸಿ, ಅದನ್ನು ಮಣ್ಣಿನ ನೆಲದ ಅಚ್ಚುಗಳಲ್ಲಿ ಸುರಿದು ಈ ವಸ್ತುಗಳನ್ನು ಮಾಡಿದರು.


ಗಿದ್ಯೋನನು ಸುಖೋತ್ ನಗರದ ಒಬ್ಬ ತರುಣನನ್ನು ಹಿಡಿದುಕೊಂಡನು. ಗಿದ್ಯೋನನು ಆ ತರುಣನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು. ಆ ತರುಣನು ಗಿದ್ಯೋನನಿಗಾಗಿ ಕೆಲವು ಹೆಸರುಗಳನ್ನು ಬರೆದನು. ಆ ತರುಣನು ಸುಖೋತ್ ನಗರದ ನಾಯಕರ ಮತ್ತು ಹಿರಿಯರ ಹೆಸರುಗಳನ್ನು ಬರೆದನು. ಅವನು ಎಪ್ಪತ್ತೇಳು ಜನರ ಹೆಸರುಗಳನ್ನು ಕೊಟ್ಟನು.


ಇಸ್ರೇಲರು ಸುಕ್ಕೋತನ್ನು ಬಿಟ್ಟು ಏತಾಮಿನಲ್ಲಿ ಪಾಳೆಯ ಹಾಕಿದರು. ಏತಾಮು ಮರುಭೂಮಿಗೆ ಹತ್ತಿರವಾಗಿತ್ತು.


ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)


ಆದ್ದರಿಂದ ಆ ದಿನ ಏಸಾವನು ಸೇಯೀರಿಗೆ ಮರಳಿ ಪ್ರಯಾಣ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು