Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:3 - ಪರಿಶುದ್ದ ಬೈಬಲ್‌

3 ಯಾಕೋಬನು ತಾನೇ ಮುಂದಾಗಿ ಏಸಾವನ ಬಳಿಗೆ ನಡೆದುಹೋಗುತ್ತಾ ಏಳು ಸಲ ನೆಲದ ತನಕ ಬಗ್ಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತಾನೇ ಅವರ ಮುಂದಾಗಿ ನಡೆದನು. ತನ್ನ ಅಣ್ಣನನ್ನು ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬಗ್ಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನಿಗೆ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬೊಗ್ಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವವರೆಗೆ ಏಳು ಸಾರಿ ನೆಲದವರೆಗೆ ಬಗ್ಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:3
12 ತಿಳಿವುಗಳ ಹೋಲಿಕೆ  

ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.


ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,


ಯೋಸೇಫನು ಮನೆಗೆ ಬಂದಾಗ, ಸಹೋದರರು ತಾವು ತಂದಿದ್ದ ಉಡುಗೊರೆಗಳನ್ನು ಅವನಿಗೆ ಕೊಟ್ಟರು. ಬಳಿಕ ಅವರು ನೆಲದವರೆಗೆ ಬಾಗಿ ನಮಸ್ಕರಿಸಿದರು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಆ ಬಳಿಕ ಅವುಗಳ ಮುಂದೆ ಹೋಗುತ್ತಾ ಅವುಗಳಿಗೆ ಮಾರ್ಗದರ್ಶನ ಮಾಡುತ್ತಾನೆ. ಕುರಿಗಳು ಅವನನ್ನು ಹಿಂಬಾಲಿಸುತ್ತವೆ; ಏಕೆಂದರೆ ಅವು ಅವನ ಸ್ವರವನ್ನು ತಿಳಿದಿವೆ.


ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.


ನೀನು ಅವನ ಅಧಿಕಾರದ ಅಧೀನದಲ್ಲಿರುವೆ. ಆದ್ದರಿಂದ ಅವನ ಬಳಿಗೆ ಹೋಗಿ ನಿನ್ನನ್ನು ಸಾಲದಿಂದ ಬಿಡುಗಡೆ ಮಾಡುವಂತೆ ಬೇಡಿಕೋ.


ಹಿಂದೆ ಆಹಾರವನ್ನು ಸಮೃದ್ಧಿಕರವಾಗಿ ಹೊಂದಿದ್ದವರು ಆಹಾರಕ್ಕಾಗಿ ದುಡಿಯಬೇಕಾಗುವುದು. ಹಿಂದೆ ಆಹಾರವಿಲ್ಲದೆ ಹಸಿದಿದ್ದವರಿಗೆ ಇಂದು ಆಹಾರ ಸಮೃದ್ಧಿಕರವಾಗಿರುವುದು! ಬಂಜೆಗೆ ಈಗ ಏಳು ಜನ ಮಕ್ಕಳಿರುವರು. ಆದರೆ ಹೆಚ್ಚು ಮಕ್ಕಳಿದ್ದ ತಾಯಿ ಇಂದು ವೇದನೆಗೊಂಡಿರುವಳು ಏಕೆಂದರೆ ಅವಳ ಮಕ್ಕಳೆಲ್ಲ ಸತ್ತುಹೋಗಿದ್ದಾರೆ.


ಯಾಕೋಬನು ದಾಸಿಯರನ್ನು ಮತ್ತು ಅವರ ಮಕ್ಕಳನ್ನು ಮುಂಭಾಗದಲ್ಲಿಯೂ ಲೇಯಳನ್ನು ಮತ್ತು ಅವಳ ಮಕ್ಕಳನ್ನು ಅವರ ಹಿಂಭಾಗದಲ್ಲಿಯೂ, ರಾಹೇಲಳನ್ನು ಮತ್ತು ಯೋಸೇಫನನ್ನು ಕೊನೆಯ ಸ್ಥಳದಲ್ಲೂ ಇರಿಸಿದನು.


ಆಗ ಯೋಸೇಫನು ಇಸ್ರೇಲನ ತೊಡೆಯ ಮೇಲೆ ಕುಳಿತಿದ್ದ ತನ್ನ ಗಂಡುಮಕ್ಕಳನ್ನು ಎತ್ತಿಕೊಂಡನು. ಬಳಿಕ ಅವರು ಇಸ್ರೇಲನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು