ಆದಿಕಾಂಡ 34:2 - ಪರಿಶುದ್ದ ಬೈಬಲ್2 ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಮಾನಭಂಗ ಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು. ಅಧ್ಯಾಯವನ್ನು ನೋಡಿ |
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.
ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.
ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸಬೇಕು? ಅವನು ತನ್ನನ್ನು ಯಾರೆಂದು ತಿಳಿದುಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಪುರಾಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶೆಕೆಮನ ತಂದೆ.)