Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:21 - ಪರಿಶುದ್ದ ಬೈಬಲ್‌

21 “ಈ ಇಸ್ರೇಲರಿಗೆ ನಮ್ಮ ಸ್ನೇಹಿತರಾಗಿರಲು ಇಷ್ಟ; ಇವರು ನಮ್ಮ ದೇಶದಲ್ಲಿ ವಾಸವಾಗಿದ್ದುಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ; ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿಕೊಡುವುದಕ್ಕೂ ಸಂತೋಷಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಈ ಜನರು ನಮ್ಮೊಡನೆ ಶಾಂತಿಸಮಾಧಾನದಿಂದಿದ್ದಾರೆ; ಇವರು ನಮ್ಮ ನಾಡಿನಲ್ಲೇ ವಾಸಮಾಡಿಕೊಂಡು ವ್ಯಾಪಾರಮಾಡಲಿ; ಈ ನಾಡು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣು ಮಕ್ಕಳನ್ನು ಮದುವೆಮಾಡಿಕೊಳ್ಳೋಣ, ನಮ್ಮ ಹೆಣ್ಣು ಮಕ್ಕಳನ್ನು ಅವರಿಗೆ ಕೊಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಜನರು ನಮ್ಮೊಡನೆ ಸಮಾಧಾನದಿಂದಿದ್ದಾರೆ; ಅವರು ನಮ್ಮ ದೇಶದಲ್ಲೇ ವಾಸಮಾಡಿಕೊಂಡು ವ್ಯಾಪಾರ ಮಾಡಲಿ; ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆಯಷ್ಟೆ; ನಾವು ಅವರ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಳ್ಳೋಣ, ನಮ್ಮ ಹೆಣ್ಣು ಮಕ್ಕಳನ್ನು ಅವರಿಗೆ ಕೊಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ದೇಶದಲ್ಲಿ ವಾಸಮಾಡಿ, ಅದರಲ್ಲಿ ವ್ಯಾಪಾರಮಾಡಲಿ. ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಪುತ್ರಿಯರನ್ನು ನಮಗೆ ಹೆಂಡತಿಯರನ್ನಾಗಿ ಮಾಡಿಕೊಳ್ಳೋಣ ಮತ್ತು ನಮ್ಮ ಪುತ್ರಿಯರನ್ನು ಅವರಿಗೆ ಕೊಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:21
4 ತಿಳಿವುಗಳ ಹೋಲಿಕೆ  

ಹಮೋರನು ಮತ್ತು ಶೆಕೆಮನು ತಮ್ಮ ನಗರದ ಸಭಾಸ್ಥಳಕ್ಕೆ ಹೋದರು. ಅವರು ಪಟ್ಟಣದ ಗಂಡಸರೊಂದಿಗೆ ಮಾತಾಡಿ,


ಆದರೆ ನಾವು ಮಾಡಬೇಕಾದ ಒಂದೇ ಒಂದು ಕಾರ್ಯವೇನೆಂದರೆ, ಇಸ್ರೇಲರಂತೆ ನಮ್ಮ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಳ್ಳಬೇಕು.


ನೀವು ನಮ್ಮೊಂದಿಗೆ ಒಂದೇ ದೇಶದಲ್ಲಿ ವಾಸವಾಗಿರಬಹುದು. ನಿಮಗೆ ಇಲ್ಲಿ ಜಮೀನು ಮಾಡಿಕೊಳ್ಳಲು ಮತ್ತು ವ್ಯಾಪಾರ ಮಾಡಲು ಸ್ವತಂತ್ರವಿದೆ” ಎಂದು ಹೇಳಿದನು.


ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ. ಆಗ ನೀವು ಯಥಾರ್ಥರಾದವರೋ ಗೂಢಚಾರರೋ ಎಂದು ಗೊತ್ತಾಗುವುದು. ನೀವು ಸತ್ಯವನ್ನು ಹೇಳಿದ್ದರೆ ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು; ನಮ್ಮ ದೇಶದಲ್ಲಿ ಆಹಾರವನ್ನು ಕೊಳ್ಳಲು ನಿಮಗೆ ಯಾವ ತಡೆಯೂ ಇರುವುದಿಲ್ಲ’ ಎಂದು ಹೇಳಿದನು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು