ಆದಿಕಾಂಡ 34:27 - ಪರಿಶುದ್ದ ಬೈಬಲ್27 ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಯಕೋಬನ ಇತರ ಮಕ್ಕಳು ಹತರಾದವರ ಬಳಿಗೆ ಬಂದು, ‘ತಂಗಿಯನ್ನು ಅವಮಾನ ಪಡಿಸಿದವರು ಇವರೇ ಅಲ್ಲವೆ’, ಎಂದುಕೊಂಡು ಆ ಊರನ್ನೇ ಸೂರೆಮಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವರು ಹತವಾದನಂತರ ಯಾಕೋಬನ ಮಕ್ಕಳು ಬಂದು - ಇವರು ನಮ್ಮ ತಂಗಿಯನ್ನು ಅವಮಾನಪಡಿಸಿದರಲ್ಲಾ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು. ಅಧ್ಯಾಯವನ್ನು ನೋಡಿ |
ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.