ಆದಿಕಾಂಡ 34:3 - ಪರಿಶುದ್ದ ಬೈಬಲ್3 ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನ ಮನಸ್ಸು ಯಕೋಬನ ಮಗಳಾದ ಆ ದೀನಳ ಮೇಲೆಯೇ ತಲ್ಲೀನಗೊಂಡಿತ್ತು. ಆಕೆಯನ್ನು ಮೋಹಿಸಿ ಅವಳ ಮನವೊಲಿಸುವಂಥ ಮಾತುಗಳನ್ನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು; ಆ ಹುಡುಗಿಯನ್ನು ಮೋಹಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಅವನು ಆ ಹುಡುಗಿಯನ್ನು ಪ್ರೀತಿಸಿ, ಆಕೆಯೊಂದಿಗೆ ಅನುರಾಗದಿಂದ ಮಾತನಾಡಿದನು. ಅಧ್ಯಾಯವನ್ನು ನೋಡಿ |
ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದುಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಆ ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಆ ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು.