Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:4 - ಪರಿಶುದ್ದ ಬೈಬಲ್‌

4 ಶೆಕೆಮನು ತನ್ನ ತಂದೆಗೆ, “ದಯವಿಟ್ಟು ಈ ಹುಡುಗಿಯನ್ನು ನನಗೆ ಮದುವೆಮಾಡಿಸು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಶೆಕೆಮನು ತನ್ನ ತಂದೆಯಾದ ಹಮೋರನಿಗೆ, “ನೀನು ಈ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತನ್ನ ತಂದೆ ಹಮೋರನನ್ನು, “ಆ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ತನ್ನ ತಂದೆಯಾದ ಹಮೋರನನ್ನು - ನೀನು ಆ ಹುಡುಗಿಯನ್ನು ನನಗೆ ಮದುವೆ ಮಾಡಿಸಬೇಕೆಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಶೆಕೆಮನು ತನ್ನ ತಂದೆ ಹಮೋರನಿಗೆ, “ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:4
6 ತಿಳಿವುಗಳ ಹೋಲಿಕೆ  

ಅವನು ಮನೆಗೆ ಹಿಂದಿರುಗಿ ತನ್ನ ತಂದೆತಾಯಿಗಳಿಗೆ, “ನಾನು ತಿಮ್ನಾ ನಗರದಲ್ಲಿ ಒಬ್ಬ ಫಿಲಿಷ್ಟಿಯರ ಸ್ತ್ರೀಯನ್ನು ನೋಡಿದ್ದೇನೆ. ನೀವು ಅವಳನ್ನು ನನಗೆ ಮದುವೆ ಮಾಡಿಸಿಕೊಡಿ” ಎಂದು ಕೇಳಿದನು.


ನನಗಾದ ಈ ಕಳಂಕವನ್ನು ಎಂದೆಂದಿಗೂ ನಾನು ತೊಡೆದುಹಾಕಲಾಗುವುದಿಲ್ಲ. ಇಸ್ರೇಲಿನ ಜನರಲ್ಲಿ ತಮ್ಮ ಅಪಮಾನಕರವಾದ ಕಾರ್ಯಗಳಿಂದ ನೀಚರೆನಿಸಿಕೊಳ್ಳುವ ಜನರಂತೆ ನೀನೂ ಆಗಿಬಿಡುವೆ. ದಯವಿಟ್ಟು ರಾಜನೊಂದಿಗೆ ಮಾತನಾಡು. ಅವನು ನಿನ್ನ ಜೊತೆಯಲ್ಲಿ ನನ್ನ ಮದುವೆ ಮಾಡಲಿ” ಎಂದಳು.


ಅವನ ತಾಯಿಯು ಅವನಿಗೆ ಈಜಿಪ್ಟಿನ ಹುಡುಗಿಯನ್ನು ತಂದು ಮದುವೆ ಮಾಡಿಸಿದಳು. ಅವರು ಪಾರಾನ್ ಕಾಡಿನಲ್ಲಿ ತಮ್ಮ ವಾಸವನ್ನು ಮುಂದುವರಿಸಿದರು.


ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಯಾಕೋಬನು ತನ್ನ ಮಗಳಿಗೆ ಶೆಕೆಮನಿಂದ ಮಾನಭಂಗವಾದ ಸುದ್ದಿಯನ್ನು ಕೇಳಿದನು. ಆದರೆ ಅವನ ಗಂಡುಮಕ್ಕಳೆಲ್ಲ ಕುರಿಗಳೊಂದಿಗೆ ಹೊಲದಲ್ಲಿದ್ದುದರಿಂದ ಅವರು ಮನೆಗೆ ಬರುವತನಕ ಏನೂ ಮಾಡಲಿಲ್ಲ.


ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು