ಆದಿಕಾಂಡ 34:5 - ಪರಿಶುದ್ದ ಬೈಬಲ್5 ಯಾಕೋಬನು ತನ್ನ ಮಗಳಿಗೆ ಶೆಕೆಮನಿಂದ ಮಾನಭಂಗವಾದ ಸುದ್ದಿಯನ್ನು ಕೇಳಿದನು. ಆದರೆ ಅವನ ಗಂಡುಮಕ್ಕಳೆಲ್ಲ ಕುರಿಗಳೊಂದಿಗೆ ಹೊಲದಲ್ಲಿದ್ದುದರಿಂದ ಅವರು ಮನೆಗೆ ಬರುವತನಕ ಏನೂ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾಯಿತೆಂಬ ಸಮಾಚಾರ ಯಕೋಬನಿಗೆ ಮುಟ್ಟಿದಾಗ ಅವನ ಗಂಡು ಮಕ್ಕಳು ಅಡವಿಯಲ್ಲಿ ದನಕಾಯುತ್ತಿದ್ದರು. ಅವರು ಬರುವ ತನಕ ಯಕೋಬನು ಸುಮ್ಮನೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯಾಕೋಬನು ತನ್ನ ಮಗಳಾದ ದೀನಳನ್ನು ಶೆಕೆಮನು ಕೆಡಿಸಿದ್ದಾನೆಂದು ಕೇಳಿದಾಗ, ಅವನ ಮಕ್ಕಳು ಅವನ ಪಶುಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವವರೆಗೆ ಯಾಕೋಬನು ಸುಮ್ಮನಿದ್ದನು. ಅಧ್ಯಾಯವನ್ನು ನೋಡಿ |
ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.