Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:1 - ಪರಿಶುದ್ದ ಬೈಬಲ್‌

1 ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರು ಯಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣ ಏಸಾವನ ಬಳಿಯಿಂದ ಓಡಿಹೋಗುವಾಗ ನಿನಗಲ್ಲಿ ದರ್ಶನ ಇತ್ತ ದೇವರು ನಾನೇ. ನನಗೊಂದು ಬಲಿಪೀಠವನ್ನು ಅಲ್ಲಿ ಕಟ್ಟಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ಯಾಕೋಬನಿಗೆ - ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾಹತ್ತಿ ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ; ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:1
21 ತಿಳಿವುಗಳ ಹೋಲಿಕೆ  

ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಆ ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ’ ಎಂದು ತಿಳಿಸಿದನು” ಎಂಬುದಾಗಿ ಹೇಳಿದನು.


ಯಾಕೋಬನು ದೇವದೂತನೊಡನೆ ಹೋರಾಡಿ ಗೆದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಆ ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


“ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.


ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಆ ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಆ ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.


ಯೆಹೋವನು ಯಾಕೋಬನಿಗೆ, “ನಿನ್ನ ಪೂರ್ವಿಕರು ವಾಸಿಸಿದ ನಿನ್ನ ಸ್ವಂತ ಸ್ಥಳಕ್ಕೆ ಹಿಂತಿರುಗಿ ಹೋಗು. ನಾನು ನಿನ್ನ ಸಂಗಡವಿರುತ್ತೇನೆ” ಎಂದು ಹೇಳಿದನು.


ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.


ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತೀರ್ಮಾನಿಸಿದನು. ಆದರೆ ಮೋಶೆ ಫರೋಹನ ಬಳಿಯಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು.


ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.


ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.


ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಆದರೆ ದೀನಳ ಅಣ್ಣಂದಿರು, “ನಮ್ಮ ತಂಗಿಯನ್ನು ಆ ಜನರು ಸೂಳೆಯಂತೆ ಉಪಯೋಗಿಸಿಕೊಳ್ಳಲು ನಾವು ಬಿಡಬೇಕೇ? ಇಲ್ಲ, ನಮ್ಮ ತಂಗಿಗೆ ಆ ಜನರು ಮಾಡಿದ್ದು ತಪ್ಪು” ಎಂದು ಹೇಳಿದರು.


ಸಮುವೇಲನು, “ನೀನು ಅಲ್ಲಿಂದ ಮುಂದೆ ಹೋಗುತ್ತಾ ತಾಬೋರಿನ ಹತ್ತಿರವಿರುವ ಒಂದು ದೊಡ್ಡ ಓಕ್ ವೃಕ್ಷದ ಬಳಿಗೆ ಬರುವೆ. ಅಲ್ಲಿ ನಿನ್ನನ್ನು ಮೂರು ಜನರು ಭೇಟಿಯಾಗುತ್ತಾರೆ. ಆ ಮೂರು ಜನರು ದೇವರ ಆರಾಧನೆಗಾಗಿ ಬೇತೇಲಿಗೆ ಹೋಗುತ್ತಿರುತ್ತಾರೆ. ಮೊದಲನೆಯವನು ಮೂರು ಮರಿ ಹೋತಗಳನ್ನೂ ಎರಡನೆಯವನು ಮೂರು ರೊಟ್ಟಿಗಳನ್ನೂ ಮೂರನೆಯವನು ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋಗುತ್ತಿರುತ್ತಾರೆ.


ಬಳಿಕ ಯಾಕೋಬನು ತನ್ನ ಪ್ರಯಾಣವನ್ನು ಮುಂದುವರಿಸಿದನು. ಅವನು ಪೂರ್ವ ದಿಕ್ಕಿನಲ್ಲಿದ್ದ ನಾಡಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು