Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:14 - ಪರಿಶುದ್ದ ಬೈಬಲ್‌

14-15 ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷವಾದ ಸ್ಥಳ. ಯಾಕೆಂದರೆ ಅಲ್ಲಿ ದೇವರು ಯಾಕೋಬನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯಕೋಬನು ತನ್ನೊಡನೆ ದೇವರು ಮಾತನಾಡಿದ ಆ ಸ್ಥಳದಲ್ಲಿ ಕಲ್ಲಿನ ಸ್ತಂಭವೊಂದನ್ನು ನಿಲ್ಲಿಸಿ, ಅದರ ಮೇಲೆ ಪಾನಕಾ ಅಭಿಷೇಕಮಾಡಿ, ಎಣ್ಣೆಹೊಯ್ದು ಅಭ್ಯಂಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಕೋಬನು ತನ್ನ ಸಂಗಡ ದೇವರು ಮಾತಾಡಿದ ಸ್ಥಳದಲ್ಲಿ ಕಲ್ಲಿನ ಕಂಬವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೇ ಹೊಯಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ, ಆ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ, ಪಾನಾರ್ಪಣೆ ಮಾಡಿ, ಅದರ ಮೇಲೆ ಎಣ್ಣೆಯನ್ನು ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:14
6 ತಿಳಿವುಗಳ ಹೋಲಿಕೆ  

ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ಧ್ವಜ” ಎಂದು ಹೆಸರಿಟ್ಟನು.


ಯಾಕೋಬನು ರಾಹೇಲಳ ಗೌರವಾರ್ಥವಾಗಿ ಆಕೆಯ ಸಮಾಧಿಯ ಮೇಲೆ ವಿಶೇಷವಾದ ಒಂದು ಕಲ್ಲನ್ನು ಇಟ್ಟನು. ಇಂದಿಗೂ ಆ ವಿಶೇಷವಾದ ಕಲ್ಲು ಅಲ್ಲಿದೆ.


ಅಂತೆಯೇ ಯಾಕೋಬನು ಮಾಡಿಕೊಂಡ ಒಪ್ಪಂದಕ್ಕೆ ಸಾಕ್ಷಿಯಾಗಿ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಬಂದು ಅಲ್ಲಿಟ್ಟನು.


ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು