ಆದಿಕಾಂಡ 35:16 - ಪರಿಶುದ್ದ ಬೈಬಲ್16 ಯಾಕೋಬನು ಮತ್ತು ಅವನ ಜನರು ಬೇತೇಲಿನಿಂದ ಹೊರಟು ಬೆತ್ಲೆಹೇಮೆಂಬ ಎಫ್ರಾತೂರಿಗೆ ಬರುವುದಕ್ಕಿಂತ ಸ್ವಲ್ಪಮುಂಚೆ ರಾಹೇಲಳಿಗೆ ಹೆರಿಗೆ ಕಾಲ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಬಳಿಕ ಅವರು ಬೇತೇಲನ್ನು ಬಿಟ್ಟು ಹೊರಟರು. ಎಫ್ರಾತೂರಿಗೆ ಸೇರುವುದಕ್ಕೆ ಇನ್ನು ಸ್ವಲ್ಪ ದೂರವಿದ್ದಾಗ ರಾಖೇಲಳಿಗೆ ಹೆರಿಗೆಯ ಕಾಲ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಬೇತೇಲಿನಿಂದ ಪ್ರಯಾಣ ಮಾಡುತ್ತಿರಲು ಎಫ್ರಾತೂರಿಗೆ ಸೇರುವದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳಿಗೆ ಹೆರಿಗೇ ಕಾಲಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬೇತೇಲಿನಿಂದ ಅವರು ಪ್ರಯಾಣಮಾಡಿ, ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ, ರಾಹೇಲಳು ಪ್ರಸವವೇದನೆಯಿಂದ ಕಷ್ಟಪಟ್ಟಳು. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
ಈ ದಿನ ನನ್ನನ್ನು ಬಿಟ್ಟು ನೀನು ಮುಂದೆ ಸಾಗಿದಾಗ, ಬೆನ್ಯಾಮೀನನ ಮೇರೆಯಲ್ಲಿರುವ ಚೆಲ್ಚಹಿನಲ್ಲಿನ ರಾಹೇಲಳ ಸಮಾಧಿಯ ಬಳಿ ಇಬ್ಬರು ಮನುಷ್ಯರನ್ನು ಸಂಧಿಸುವೆ. ಅವರಿಬ್ಬರೂ ನಿನಗೆ, ‘ನೀನು ಹುಡುಕುತ್ತಿದ್ದ ಕತ್ತೆಗಳು ಒಬ್ಬನಿಗೆ ಸಿಕ್ಕಿವೆ. ನಿನ್ನ ತಂದೆಯು ಕತ್ತೆಗಳ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿನ್ನ ಬಗ್ಗೆ ಚಿಂತಿಸುತ್ತಿದ್ದಾನೆ. ನನ್ನ ಮಗನು ಎಲ್ಲಿಗೆ ಹೋದನೋ ಎಂದು ಹಂಬಲಿಸುತ್ತಿದ್ದಾನೆ’ ಎಂದು ಹೇಳುವರು” ಎಂದನು.