ಆದಿಕಾಂಡ 35:2 - ಪರಿಶುದ್ದ ಬೈಬಲ್2 ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ. ಅಧ್ಯಾಯವನ್ನು ನೋಡಿ |
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”
ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.
“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.
ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.