ಈ ದಿನ ನನ್ನನ್ನು ಬಿಟ್ಟು ನೀನು ಮುಂದೆ ಸಾಗಿದಾಗ, ಬೆನ್ಯಾಮೀನನ ಮೇರೆಯಲ್ಲಿರುವ ಚೆಲ್ಚಹಿನಲ್ಲಿನ ರಾಹೇಲಳ ಸಮಾಧಿಯ ಬಳಿ ಇಬ್ಬರು ಮನುಷ್ಯರನ್ನು ಸಂಧಿಸುವೆ. ಅವರಿಬ್ಬರೂ ನಿನಗೆ, ‘ನೀನು ಹುಡುಕುತ್ತಿದ್ದ ಕತ್ತೆಗಳು ಒಬ್ಬನಿಗೆ ಸಿಕ್ಕಿವೆ. ನಿನ್ನ ತಂದೆಯು ಕತ್ತೆಗಳ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿನ್ನ ಬಗ್ಗೆ ಚಿಂತಿಸುತ್ತಿದ್ದಾನೆ. ನನ್ನ ಮಗನು ಎಲ್ಲಿಗೆ ಹೋದನೋ ಎಂದು ಹಂಬಲಿಸುತ್ತಿದ್ದಾನೆ’ ಎಂದು ಹೇಳುವರು” ಎಂದನು.
ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷವಾದ ಸ್ಥಳ. ಯಾಕೆಂದರೆ ಅಲ್ಲಿ ದೇವರು ಯಾಕೋಬನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.
ಪದ್ದನ್‌ಅರಾಮಿನಿಂದ ಹಿಂತಿರುಗಿ ಬರುತ್ತಿರುವಾಗ ರಾಹೇಲಳು ಸತ್ತಳು. ಇದು ನನಗೆ ತುಂಬ ದುಃಖವನ್ನು ಉಂಟುಮಾಡಿತು. ನಾವು ಕಾನಾನ್ ದೇಶದಲ್ಲಿ ಎಫ್ರಾತ್ ನಗರದ ಕಡೆಗೆ ಪ್ರಯಾಣ ಮಾಡುತ್ತಿದ್ದೆವು. ಆದ್ದರಿಂದ ನಾನು ಅವಳನ್ನು ಬೆತ್ಲೆಹೇಮೆಂಬ ಎಫ್ರಾತ್ ನಗರದ ರಸ್ತೆಯಲ್ಲಿ ಸಮಾಧಿ ಮಾಡಿದೆನು” ಎಂದು ಹೇಳಿದನು.