Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:26 - ಪರಿಶುದ್ದ ಬೈಬಲ್‌

26 ಜಿಲ್ಪಳು ಲೇಯಳ ದಾಸಿ. ಜಿಲ್ಪಳ ಗಂಡುಮಕ್ಕಳು: ಗಾದ್ ಮತ್ತು ಆಶೇರ್. ಇವರೆಲ್ಲರು ಯಾಕೋಬನಿಗೆ ಪದ್ದನ್‌ಅರಾಮಿನಲ್ಲಿ ಹುಟ್ಟಿದ ಗಂಡುಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಗಾದ್, ಆಶೇರ್ - ಇವರಿಬ್ಬರು ಲೇಯಳ ದಾಸಿ ಜಿಲ್ಪಳಲ್ಲಿ ಹುಟ್ಟಿದವರು. ಮೆಸಪೊಟೇಮಿಯಾದಲ್ಲಿ ಯಕೋಬನಿಗೆ ಹುಟ್ಟಿದ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಗಾದ್, ಆಶೇರ್ ಇವರಿಬ್ಬರು ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು. ಪದ್ದನ್ಅರಾವಿುನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಲೇಯಳ ದಾಸಿ ಜಿಲ್ಪಳ ಪುತ್ರರು: ಗಾದ್ ಮತ್ತು ಆಶೇರ್. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:26
10 ತಿಳಿವುಗಳ ಹೋಲಿಕೆ  

ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.


ನಂತರ ಅವರೆಲ್ಲರೂ, ಯಾಕೋಬನ ತಂದೆ ವಾಸಿಸಿದ ಸ್ಥಳವಾದ ಕಾನಾನಿಗೆ ಮರಳಿ ಪ್ರಯಾಣ ಬೆಳೆಸಿದರು. ಯಾಕೋಬನು ಹೊಂದಿದ್ದ ಎಲ್ಲಾ ಆಡುಕುರಿಗಳ ಮಂದೆಗಳು ಅವರ ಮುಂದೆ ನಡೆದವು. ಅವನು ಪದ್ದನ್‌ಅರಾಮಿನಲ್ಲಿದ್ದಾಗ ಹೊಂದಿಕೊಂಡಿದ್ದ ಪ್ರತಿಯೊಂದನ್ನೂ ಅವರು ತೆಗೆದುಕೊಂಡು ಹೋದರು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ರೆಬೆಕ್ಕಳನ್ನು ಮದುವೆಯಾದನು. ರೆಬೆಕ್ಕಳು ಪದ್ದನ್ ಅರಾಮಿನವಳು. ಆಕೆ ಬೆತೂವೇಲನ ಮಗಳು ಮತ್ತು ಅರಾಮ್ಯನಾದ ಲಾಬಾನನ ತಂಗಿ.


ಆದ್ದರಿಂದ ಈ ಸ್ಥಳವನ್ನು ಬಿಟ್ಟು ಪದ್ದನ್‌ಅರಾಮಿಗೆ ಹೊರಟು ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೋಗು. ನಿನ್ನ ತಾಯಿಯ ಅಣ್ಣನಾದ ಲಾಬಾನನು ಅಲ್ಲಿ ವಾಸಿಸುತ್ತಿದ್ದಾನೆ. ಅವನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊ.


ಯಾಕೋಬನ ಕುಟುಂಬದ ಚರಿತ್ರೆಯಿದು: ಯೋಸೇಫನು ಹದಿನೇಳು ವರ್ಷದ ಯೌವನಸ್ಥನಾಗಿದ್ದನು. ಆಡುಕುರಿಗಳನ್ನು ಸಾಕುವುದು ಅವನ ಕಸುಬಾಗಿತ್ತು. ತನ್ನ ಅಣ್ಣಂದಿರೊಡನೆ ಅಂದರೆ ಬಿಲ್ಹಾ ಮತ್ತು ಜಿಲ್ಪಾ ಎಂಬ ತನ್ನ ಮಲತಾಯಿಗಳ ಮಕ್ಕಳೊಡನೆ ಯೋಸೇಫನು ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರೇನಾದರೂ ಕೆಟ್ಟದ್ದನ್ನು ಮಾಡಿದರೆ ಯೋಸೇಫನು ತಂದೆಗೆ ತಿಳಿಸುತ್ತಿದ್ದನು.


(ಲಾಬಾನನು ತನ್ನ ಸೇವಕಿಯಾದ ಜಿಲ್ಪಾಳನ್ನು ತನ್ನ ಮಗಳಿಗೆ ಸೇವಕಿಯನ್ನಾಗಿ ಕೊಟ್ಟನು.)


ಮೋಶೆಯು ಗಾದನ ಕುಲದ ಪ್ರತಿಯೊಂದು ಗೋತ್ರದವರಿಗೆ ಕೊಟ್ಟ ಪ್ರದೇಶ ಇಂತಿದೆ:


ಭೂಮಿಯ ಐದನೆಯ ಭಾಗವನ್ನು ಆಶೇರ್ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರದವರು ಭೂಮಿಯಲ್ಲಿ ತಮ್ಮ ಪಾಲನ್ನು ಪಡೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು