ಆದಿಕಾಂಡ 36:24 - ಪರಿಶುದ್ದ ಬೈಬಲ್24 ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಗಂಡುಮಕ್ಕಳಿದ್ದರು. (ತನ್ನ ತಂದೆಯ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೇ ಅನಾಹ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಮಕ್ಕಳು. ಈ ಅನಾಹನೇ ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಹಿಡಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಸಿಬೆಯೋನನ ಮಕ್ಕಳು - ಅಯ್ಯಾ, ಅನಾಹ. ಈ ಅನಾಹನೇ ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಸಿಬೆಯೋನನ ಮಕ್ಕಳು: ಅಯ್ಯಾಹ ಮತ್ತು ಅನಾಹ ಎಂಬುವರು. ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೂ ಅರಣ್ಯದಲ್ಲಿ ಹೇಸರಗತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು.