Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:31 - ಪರಿಶುದ್ದ ಬೈಬಲ್‌

31 ಆ ಸಮಯದಲ್ಲಿ ಎದೋಮಿನಲ್ಲಿ ರಾಜರುಗಳಿದ್ದರು. ಇಸ್ರೇಲರಿಗಿಂತಲೂ ಮುಂಚೆ ಎದೋಮಿಗೆ ರಾಜರುಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇಸ್ರಯೇಲರ ಅರಸರು ಆಳುವುದಕ್ಕೆ ಮುಂಚೆ ಎದೋಮ್ಯರ ನಾಡಲ್ಲಿ ಆಳುತ್ತಿದ್ದ ಅರಸರ ಹೆಸರುಗಳು ಹೀಗಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇಸ್ರಾಯೇಲ್ಯರ ಅರಸರು ಆಳುವದಕ್ಕಿಂತ ಮುಂಚೆ ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:31
11 ತಿಳಿವುಗಳ ಹೋಲಿಕೆ  

ಹೊಸ ಜನಾಂಗಗಳು ನಿನ್ನಿಂದ ಹುಟ್ಟುವವು; ರಾಜರುಗಳು ನಿನ್ನಿಂದ ಬರುವರು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.


ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”


ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು. ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.


ಮೋಶೆಯು ಕಾದೇಶಿನಲ್ಲಿದ್ದಾಗ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಂಬಂಧಿಕರವಾದ ಇಸ್ರೇಲರು ಕೇಳಿಕೊಳ್ಳುವುದೇನೆಂದರೆ: ನಮಗೆ ಸಂಭವಿಸಿದ ಎಲ್ಲಾ ಕಷ್ಟಗಳು ನಿಮಗೆ ಗೊತ್ತಿದೆ.


ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.


ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.


ದೀಶೋನ್, ಏಚೆರ್ ಮತ್ತು ದೀಶಾನ್. ಸೇಯೀರ್‌ನಲ್ಲಿ ವಾಸವಾಗಿದ್ದ ಹೋರಿಯ ಕುಟುಂಬಗಳ ನಾಯಕರುಗಳು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು