Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:34 - ಪರಿಶುದ್ದ ಬೈಬಲ್‌

34 ಯೋಬಾಬನು ಸತ್ತಮೇಲೆ ಹುಷಾಮನು ಆಳಿದನು. ಹುಷಾಮನು ತೇಮಾನೀಯರ ದೇಶದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯೋಬಾಬನು ಸತ್ತ ಮೇಲೆ ತೇಮಾನೀಯರ ನಾಡಿನವನಾದ ಹುಷಾಮನು ಅವನಿಗೆ ಬದಲಾಗಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹುಷಾಮನು ಅವನಿಗೆ ಬದಲಾಗಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:34
8 ತಿಳಿವುಗಳ ಹೋಲಿಕೆ  

ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?


ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.


ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್,


ಎಲೀಫಜನಿಗೆ ಐದು ಮಂದಿ ಗಂಡುಮಕ್ಕಳಿದ್ದರು: ತೇಮಾನ್, ಓಮಾರ್, ಚೆಪೋ, ಗತಾಮ್ ಮತ್ತು ಕೆನಜ್.


ಬೆಲಗನು ಸತ್ತಮೇಲೆ, ಯೋಬಾಬನು ರಾಜನಾದನು. ಯೋಬಾಬನು ಬೊಚ್ರದವನಾದ ಚೆರಹನ ಮಗನು.


ಹುಷಾಮನು ಸತ್ತಮೇಲೆ, ಹದದನು ಆ ದೇಶವನ್ನು ಆಳಿದನು. ಹದದನು ಬೆದದನ ಮಗನು. (ಮೊವಾಬ್ಯರನ್ನು ಮಿದ್ಯಾನರ ದೇಶದಲ್ಲಿ ಸೋಲಿಸಿದವನೇ ಬೆದದನು.) ಹದದನು ಅವೀತ್ ಪಟ್ಟಣದವನು.


ಯೋಬಾಬ ಅರಸನು ಸತ್ತಾಗ ತೇಮಾನೀಯರ ದೇಶದವನಾದ ಹೂಷಾಮನು ಅರಸನಾದನು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು