ಆದಿಕಾಂಡ 36:5 - ಪರಿಶುದ್ದ ಬೈಬಲ್5 ಒಹೊಲೀಬಾಮಳಿಗೆ ಮೂವರು ಗಂಡುಮಕ್ಕಳಿದ್ದರು: ಯೆಗೂಷ, ಯಳಾಮ ಮತ್ತು ಕೋರಹ. ಇವರೆಲ್ಲರೂ ಏಸಾವನ ಗಂಡುಮಕ್ಕಳು ಮತ್ತು ಕಾನಾನ್ ದೇಶದಲ್ಲಿ ಹುಟ್ಟಿದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಒಹೊಲೀಬಾಮಳು ಯೊಗೂಷನನ್ನು, ಯಳಾಮನನ್ನು ಹಾಗು ಕೋರಹನನ್ನು ಹೆತ್ತಳು. ಇವರೆಲ್ಲರು ಏಸಾವನು ಕಾನಾನ್ ನಾಡಿನಲ್ಲಿ ಇದ್ದಾಗ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಒಹೊಲೀಬಾಮಳು ಯೆಗೂಷನನ್ನೂ ಯಳಾಮನನ್ನೂ ಕೋರಹನನ್ನೂ ಹೆತ್ತಳು. ಕಾನಾನ್‍ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಒಹೊಲೀಬಾಮಳು ಯೆಯೂಷನನ್ನು, ಯಳಾಮನನ್ನು, ಕೋರಹ ಇವರನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಪುತ್ರರು. ಅಧ್ಯಾಯವನ್ನು ನೋಡಿ |
ಯಾಕೋಬ ಮತ್ತು ಏಸಾವರ ಕುಟುಂಬಗಳು ಬಹಳ ವೃದ್ಧಿಯಾದ ಕಾರಣ ಕಾನಾನ್ ದೇಶವು ಅವರಿಗೆ ಸಾಕಾಗಲಿಲ್ಲ. ಆದ್ದರಿಂದ ಏಸಾವನು ತನ್ನ ತಮ್ಮನಾದ ಯಾಕೋಬನಿಂದ ದೂರ ಹೋದನು. ಏಸಾವನು ತನ್ನ ಹೆಂಡತಿಯರನ್ನೂ ಗಂಡುಹೆಣ್ಣುಮಕ್ಕಳನ್ನೂ ಎಲ್ಲಾ ಸೇವಕರನ್ನೂ ದನಗಳನ್ನೂ ಮತ್ತು ಇತರ ಪಶುಗಳನ್ನೂ ತನಗೆ ಕಾನಾನಿನಲ್ಲಿದ್ದ ಪ್ರತಿಯೊಂದು ಆಸ್ತಿಯನ್ನೂ ತೆಗೆದುಕೊಂಡು ಸೇಯೀರ್ ಬೆಟ್ಟದ ಸೀಮೆಗೆ ಹೋದನು. (ಏಸಾವನಿಗೆ ಎದೋಮ್ ಎಂಬ ಹೆಸರೂ ಇದೆ. ಎದೋಮ್ ಎಂಬುದು ಸೇಯೀರ್ ದೇಶದ ಮತ್ತೊಂದು ಹೆಸರು.)