Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:12 - ಪರಿಶುದ್ದ ಬೈಬಲ್‌

12 ಒಂದು ದಿನ ಯೋಸೇಫನ ಅಣ್ಣಂದಿರು ತಮ್ಮ ತಂದೆಯ ಆಡುಕುರಿಗಳನ್ನು ಕಾಯಲು ಶೆಕೆಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನ ಅಣ್ಣಂದಿರು ತಂದೆಯ ಆಡುಕುರಿ ಹಿಂಡುಗಳನ್ನು ಮೇಯಿಸುವುದಕ್ಕೆ ಶೆಕೆಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಮ್ಮೆ ಜೋಸೆಫನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಮೇಯಿಸಲು ಶೆಕೆಮಿಗೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಂದಾನೊಂದು ಕಾಲದಲ್ಲಿ ಅವನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಶೆಕೆವಿುನಲ್ಲಿ ಮೇಯಿಸುವದಕ್ಕೆ ಹೋಗಿದ್ದಾಗ ಇಸ್ರಾಯೇಲನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನ ಸಹೋದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವುದಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:12
7 ತಿಳಿವುಗಳ ಹೋಲಿಕೆ  

ಯಾಕೋಬನು ಕಾನಾನ್ ದೇಶದಲ್ಲಿ ನೆಲೆಸಿದನು. ಅವನ ತಂದೆ ಆ ದೇಶದಲ್ಲೇ ವಾಸವಾಗಿದ್ದನು.


ಆಮೇಲೆ ಯಾಕೋಬನು ಕಾನಾನ್ ದೇಶದ ಶೆಕೆಮ್ ಪಟ್ಟಣಕ್ಕೆ ಬಂದು ತನ್ನ ಪಾಳೆಯನ್ನು ಪಟ್ಟಣದ ಸಮೀಪದಲ್ಲಿದ್ದ ಒಂದು ಹೊಲದಲ್ಲಿ ಹಾಕಿಸಿದನು.


ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.


ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. ಯೋಸೇಫನು, “ಸರಿ, ಹೋಗುವೆನು” ಎಂದು ಉತ್ತರಿಸಿದನು.


ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು