ಆದಿಕಾಂಡ 37:17 - ಪರಿಶುದ್ದ ಬೈಬಲ್17 ಅದಕ್ಕೆ ಅವನು, “ಅವರು ಇಲ್ಲಿಂದ ಹೊರಟುಹೋದರು. ದೋತಾನಿಗೆ ಹೋಗೋಣ ಎಂದು ಅವರು ಮಾತಾಡಿಕೊಳ್ಳುವುದನ್ನು ನಾನು ಕೇಳಿದೆ” ಎಂದು ಹೇಳಿದನು. ಆದ್ದರಿಂದ ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದಕ್ಕೆ ಆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದಕ್ಕೆ ಆ ಮನುಷ್ಯ, “ಅವರು ಇಲ್ಲಿಂದ ಹೊರಟುಹೋದರು; ‘ದೋತಾನಿಗೆ ಹೋಗೋಣ’ ಎಂದು ಮಾತಾಡುವುದನ್ನು ಕೇಳಿದೆ,” ಎಂದ. ಜೋಸೆಫನು ಅವರನ್ನು ಹುಡುಕುತ್ತಾ ಹೋಗಿ, ದೋತಾನಿನಲ್ಲಿ ಅವರನ್ನು ಕಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದಕ್ಕೆ ಆ ಮನುಷ್ಯನು - ಅವರು ಇಲ್ಲಿಂದ ಹೊರಟುಹೋದರು; ದೋತಾನಿಗೆ ಹೋಗೋಣ ಎಂಬದಾಗಿ ಮಾತಾಡುವದನ್ನು ಕೇಳಿದೆನು ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ಮನುಷ್ಯನು, “ಅವರು ಇಲ್ಲಿಂದ ಹೊರಟು ಹೋದರು. ಅವರು, ‘ನಾವು ದೋತಾನಿಗೆ ಹೋಗೋಣ,’ ಎಂದು ಮಾತಾಡುವದನ್ನು ನಾನು ಕೇಳಿಸಿಕೊಂಡೆ,” ಎಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡುಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು. ಅಧ್ಯಾಯವನ್ನು ನೋಡಿ |