ಆದಿಕಾಂಡ 37:2 - ಪರಿಶುದ್ದ ಬೈಬಲ್2 ಯಾಕೋಬನ ಕುಟುಂಬದ ಚರಿತ್ರೆಯಿದು: ಯೋಸೇಫನು ಹದಿನೇಳು ವರ್ಷದ ಯೌವನಸ್ಥನಾಗಿದ್ದನು. ಆಡುಕುರಿಗಳನ್ನು ಸಾಕುವುದು ಅವನ ಕಸುಬಾಗಿತ್ತು. ತನ್ನ ಅಣ್ಣಂದಿರೊಡನೆ ಅಂದರೆ ಬಿಲ್ಹಾ ಮತ್ತು ಜಿಲ್ಪಾ ಎಂಬ ತನ್ನ ಮಲತಾಯಿಗಳ ಮಕ್ಕಳೊಡನೆ ಯೋಸೇಫನು ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರೇನಾದರೂ ಕೆಟ್ಟದ್ದನ್ನು ಮಾಡಿದರೆ ಯೋಸೇಫನು ತಂದೆಗೆ ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಜೋಸೆಫನಿಗೆ ಹದಿನೇಳು ವರ್ಷ, ಇನ್ನೂ ಯುವಕ, ತನ್ನ ಅಣ್ಣಂದಿರ ಜೊತೆಯಲ್ಲಿ, ಅಂದರೆ ತನ್ನ ಮಲತಾಯಿಯರಾದ ಬಿಲ್ಹಾ, ಜಿಲ್ಪಾ ಎಂಬುವರ ಮಕ್ಕಳ ಜೊತೆಯಲ್ಲಿ, ಆಡುಕುರಿಗಳನ್ನು ಮೇಯಿಸುತ್ತಿದ್ದ, ಅಣ್ಣಂದಿರು ಏನಾದರೂ ತಪ್ಪಿ ನಡೆದರೆ ತಂದೆಗೆ ವರದಿ ಮಾಡುತ್ತಿದ್ದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾಕೋಬನ ಮಕ್ಕಳ ಚರಿತ್ರೆ. ಯೋಸೇಫನು ಹದಿನೇಳು ವರುಷದವನಾಗಿ ಇನ್ನೂ ಹುಡುಗನಾಗಿದ್ದು ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ ತನ್ನ ಮಲತಾಯಿಗಳಾದ ಬಿಲ್ಹಾ, ಜಿಲ್ಪಾ ಎಂಬವರ ಮಕ್ಕಳ ಜೊತೆಯಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ, ತನ್ನ ಸಹೋದರರ ಸಂಗಡ ಅಂದರೆ, ತನ್ನ ತಂದೆಯ ಹೆಂಡತಿಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಮಕ್ಕಳ ಸಂಗಡ ಕುರಿಮಂದೆಗಳನ್ನು ಕಾಯುತ್ತಿದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿ |
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.