ಆದಿಕಾಂಡ 37:27 - ಪರಿಶುದ್ದ ಬೈಬಲ್27 ಈ ವ್ಯಾಪಾರಿಗಳಿಗೆ ನಾವು ಅವನನ್ನು ಮಾರಿದರೆ ನಮಗೆ ಹೆಚ್ಚು ಲಾಭವಾಗುವುದು; ಆಮೇಲೆ ನಮ್ಮ ತಮ್ಮನನ್ನು ಕೊಂದ ಅಪರಾಧವೂ ನಮ್ಮ ಮೇಲಿರುವುದಿಲ್ಲ” ಎಂದು ಹೇಳಿದನು. ಅದಕ್ಕೆ ಉಳಿದ ಸಹೋದರರೆಲ್ಲ ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವನನ್ನು ಆ ಇಷ್ಮಾಯೇಲರಿಗೆ ಮಾರಿಬಿಡೋಣ, ಬನ್ನಿ; ನಾವು ಅವನ ಮೇಲೆ ಕೈ ಹಾಕಬಾರದು, ಅವನು ನಮ್ಮ ತಮ್ಮನಲ್ಲವೆ? ರಕ್ತಸಂಬಂಧಿಯಲ್ಲವೆ?” ಎಂದು ಹೇಳಿದ. ಅವನ ಆ ಮಾತಿಗೆ ಅಣ್ಣತಮ್ಮಂದಿರು ಒಪ್ಪಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ ಬನ್ನಿ; ನಾವು ಅವನ ಮೇಲೆ ಕೈಹಾಕಬಾರದು; ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಬನ್ನಿರಿ, ಇಷ್ಮಾಯೇಲರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಏಕೆಂದರೆ ಅವನು ನಮ್ಮ ಸಹೋದರನೂ ನಮ್ಮ ದೇಹವೂ ರಕ್ತವೂ ಆಗಿದ್ದಾನೆ,” ಎಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು. ಅಧ್ಯಾಯವನ್ನು ನೋಡಿ |
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.