ಆದಿಕಾಂಡ 37:28 - ಪರಿಶುದ್ದ ಬೈಬಲ್28 ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 (ಅಷ್ಟರಲ್ಲಿ ವಿುದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು.) ಅವರು ಯೋಸೇಫನನ್ನು ಗುಂಡಿಯೊಳಗಿಂದ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ರೂಪಾಯಿಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿ |
ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.