ಆದಿಕಾಂಡ 37:3 - ಪರಿಶುದ್ದ ಬೈಬಲ್3 ಇಸ್ರೇಲನು ತುಂಬ ಮುಪ್ಪಿನವನಾಗಿದ್ದಾಗ ಯೋಸೇಫನು ಹುಟ್ಟಿದ್ದರಿಂದ ಇಸ್ರೇಲನು ತನ್ನ ಬೇರೆ ಗಂಡುಮಕ್ಕಳಿಗಿಂತಲೂ ಹೆಚ್ಚಾಗಿ ಯೋಸೇಫನನ್ನು ಪ್ರೀತಿಸಿದನು. ಯಾಕೋಬನು ತನ್ನ ಮಗನಿಗೆ ಸುಂದರವಾದ ನಿಲುವಂಗಿಯನ್ನು ಮಾಡಿಸಿ ಕೊಟ್ಟಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾದ್ದರಿಂದ ಇಸ್ರಾಯೇಲನು ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸಿ ಅವನಿಗೆ ನಿಲುವಂಗಿಯನ್ನು ಮಾಡಿಸಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನ ವಯಸ್ಸಿನಲ್ಲಿ ಹುಟ್ಟಿದ ಮಗನಾಗಿದ್ದುದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ, ಅವನಿಗೆ ಅನೇಕ ಬಣ್ಣಗಳ ಅಂಗಿಯನ್ನು ಹೊಲಿಸಿಕೊಟ್ಟನು. ಅಧ್ಯಾಯವನ್ನು ನೋಡಿ |
‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’