Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:34 - ಪರಿಶುದ್ದ ಬೈಬಲ್‌

34 ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡು ಬಹುದಿನಗಳವರೆಗೆ ದುಃಖಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿನ ಮೇಲೆ ಗೋಣೀತಟ್ಟು ಸುತ್ತಿಕೊಂಡು ತನ್ನ ಮಗನಿಗಾಗಿ ಬಹುದಿನಗಳವರೆಗೂ ಹಂಬಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:34
32 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.


ದಾವೀದನು ಯೋವಾಬನಿಗೆ ಮತ್ತು ಅವನ ಜೊತೆಯಲ್ಲಿದ್ದ ಜನರಿಗೆಲ್ಲ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು ಮತ್ತು ಶೋಕಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಅಬ್ನೇರನಿಗಾಗಿ ಶೋಕಿಸಿ” ಎಂದು ಹೇಳಿದನು. ರಾಜನಾದ ದಾವೀದನೂ ಶವಸಂಸ್ಕಾರಕ್ಕೆ ಹೋದನು. ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಸಮಾಧಿ ಮಾಡಿದರು. ಅಬ್ನೇರನ ಸಮಾಧಿಯ ಹತ್ತಿರ ರಾಜನಾದ ದಾವೀದನೂ ಇತರ ಜನರೂ ಗೋಳಾಡಿದರು.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ಇದನ್ನು ಕೇಳಿದ ಪೌಲ ಬಾರ್ನಬರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದೊಳಕ್ಕೆ ಓಡಿಹೋಗಿ ಹೀಗೆಂದು ಕೂಗಿ ಹೇಳಿದರು:


ಪ್ರಧಾನಯಾಜಕನು ಇದನ್ನು ಕೇಳಿ ಬಹಳ ಕೋಪಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈ ಮನುಷ್ಯನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಯಾವ ಸಾಕ್ಷಿಗಳ ಅಗತ್ಯವೂ ಇಲ್ಲ. ಇವನು ಮಾಡಿದ ದೇವದೂಷಣೆಯನ್ನು ನೀವೇ ಕೇಳಿದಿರಿ.


ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.


ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು.


ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.


ನಾನು ಶೋಕವಸ್ತ್ರವನ್ನು ಧರಿಸಿಕೊಂಡದ್ದು ಗಾದೆಯ ಮಾತಾಯಿತು.


ಆದರೆ ಆ ಮೂವರು ಸ್ನೇಹಿತರು ಬಹು ದೂರದಿಂದ ಯೋಬನನ್ನು ಕಂಡಾಗ ಅವನ ಗುರುತೇ ಹಿಡಿಯಲಾರದೆ ಗಟ್ಟಿಯಾಗಿ ಅಳತೊಡಗಿದರು; ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಗಳ ಮೇಲೆ ಸುರಿಸಿಕೊಂಡರು.


ಆಗ ಯೋಬನು ತನ್ನ ಮೇಲಂಗಿಯನ್ನು ಹರಿದುಕೊಂಡು, ತಲೆಯನ್ನು ಬೋಳಿಸಿಕೊಂಡು, ನೆಲದ ಮೇಲೆ ಮೊಣಕಾಲೂರಿ ದೇವರಿಗೆ ಸ್ತೋತ್ರಸಲ್ಲಿಸುತ್ತಾ,


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರೇಲರು ತಿರಿಗಿ ಸೇರಿಬಂದು ಒಂದು ದಿನದ ಉಪವಾಸ ಮಾಡಿದರು. ಶೋಕಬಟ್ಟೆಯನ್ನು ಧರಿಸಿ, ತಲೆಗೆ ಬೂದಿಯನ್ನು ಹಾಕಿ ತಮ್ಮತಮ್ಮ ದುಃಖವನ್ನು ವ್ಯಕ್ತಪಡಿಸಿದರು.


ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು.


ರಾಜನಾದ ಹಿಜ್ಕೀಯನು ಅವುಗಳನ್ನೆಲ್ಲ ಕೇಳಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯದೊಳಕ್ಕೆ ಹೋದನು.


ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.


ಅವನ ಸೇವಕರು ಅವನಿಗೆ, “ಇಸ್ರೇಲಿನ ರಾಜರುಗಳು ಕನಿಕರವುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿತಟ್ಟುಗಳನ್ನು (ನಮ್ಮ ನಡುಗಳಿಗೆ) ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗಳ ಮೇಲೆ ಹಾಕಿಕೊಂಡು ಇಸ್ರೇಲಿನ ರಾಜನ ಬಳಿಗೆ ಹೋಗೋಣ. ಅವನು ನಮ್ಮ ಜೀವವನ್ನು ಉಳಿಸಬಹುದು” ಎಂದು ಹೇಳಿದರು.


ಆಗ ದಾವೀದನು ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲ ಹರಿದುಕೊಂಡನು. ದಾವೀದನ ಜೊತೆಯಲ್ಲಿದ್ದವರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.


ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.


ಸಹೋದರರು ತುಂಬ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ಚೀಲಗಳನ್ನು ಮತ್ತೆ ಕತ್ತೆಗಳ ಮೇಲೇರಿಸಿಕೊಂಡು ನಗರಕ್ಕೆ ಹಿಂತಿರುಗಿದರು.


ಎಲೀಷನು ಅದನ್ನು ನೋಡಿ, “ನನ್ನ ತಂದೆಯೇ! ನನ್ನ ತಂದೆಯೇ! ಇಸ್ರೇಲಿಗೆ ರಥರಥಾಶ್ವಗಳೂ ಮತ್ತು ಅಶ್ವದಳವೂ ಆಗಿದ್ದವನೇ!” ಎಂದು ಕೂಗಿಕೊಂಡನು. ಎಲೀಷನು ಎಲೀಯನನ್ನು ಮತ್ತೆ ನೋಡಲಿಲ್ಲ. ಎಲೀಷನು ತನ್ನ ಬಟ್ಟೆಗಳನ್ನು ಹಿಡಿದುಕೊಂಡು, ತನ್ನ ದುಃಖವನ್ನು ತೋರ್ಪಡಿಸಲು ಅವುಗಳನ್ನು ಹರಿದು ತುಂಡುತುಂಡು ಮಾಡಿದನು.


ರಾಜನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ, ಗಲಿಬಿಲಿಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.


ಎಜೆರನು ಮತ್ತು ಎಲ್ಲಾದನ ತಂದೆ ಎಫ್ರಾಯೀಮನು. ತನ್ನ ಮಕ್ಕಳು ಸತ್ತದ್ದಕ್ಕಾಗಿ ಬಹಳ ದಿನಗಳ ತನಕ ಅವನು ಗೋಳಾಡಿದನು. ಅವನ ಕುಟುಂಬದವರೆಲ್ಲಾ ಬಂದು ಅವನನ್ನು ಸಂತೈಸಿದರು.


“ನಾನು ಬಹು ದುಃಖಿತನಾಗಿದ್ದೇನೆ; ಗೋಣಿತಟ್ಟನ್ನು ಸುತ್ತಿಕೊಂಡಿದ್ದೇನೆ; ಸೋತುಹೋದೆನೆಂದು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಂಡಿದ್ದೇನೆ.


ಪ್ರತಿಯೊಬ್ಬರ ತಲೆಯನ್ನು ಬೋಳಿಸಲಾಗಿದೆ. ಪ್ರತಿಯೊಬ್ಬರ ಗಡ್ಡವನ್ನು ಕತ್ತರಿಸಲಾಗಿದೆ. ಪ್ರತಿಯೊಬ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಬ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನ್ನು ಸುತ್ತಿಕೊಂಡಿದ್ದಾರೆ.


ತನ್ನ ಮನೆಯಿಂದ ಹೊರ ಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ತಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳುಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು