Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:35 - ಪರಿಶುದ್ದ ಬೈಬಲ್‌

35 ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:35
18 ತಿಳಿವುಗಳ ಹೋಲಿಕೆ  

ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.


ದಾವೀದನ ಕುಟುಂಬದ ನಾಯಕರು ಬಂದು ಅವನನ್ನು ನೆಲದಿಂದ ಮೇಲಕ್ಕೆತ್ತಲು ಪ್ರಯತ್ನಿಸಿದರು. ಆದರೆ ದಾವೀದನು ಮೇಲೇಳಲಿಲ್ಲ. ಅವನು ಈ ನಾಯಕರೊಂದಿಗೆ ಊಟ ಮಾಡಲಿಲ್ಲ.


ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.


ಯೆಹೋವನು ಹೀಗೆನ್ನುತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧ್ವನಿಯು ಕೇಳಿಬರುತ್ತದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”


ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.


ಇಸ್ರೇಲನು, “ಈಗ ನಾನು ನಿಮ್ಮನ್ನು ನಂಬುತ್ತೇನೆ. ನನ್ನ ಮಗನಾದ ಯೋಸೇಫನು ಇನ್ನೂ ಬದುಕಿದ್ದಾನೆ. ನಾನು ಸಾಯುವ ಮೊದಲು ಅವನನ್ನು ನೋಡುತ್ತೇನೆ” ಎಂದು ಹೇಳಿದನು.


ನಾವು ಅವನಿಗೆ, ‘ನಾವು ಯಥಾರ್ಥವಂತರು; ಗೂಢಚಾರರಲ್ಲ’ ಎಂದು ಹೇಳಿದೆವು.


ಲಾಬಾನನು ಯಾಕೋಬನಿಗೆ, “ಈ ಸ್ತ್ರೀಯರು ನನ್ನ ಮಕ್ಕಳು. ಅವರ ಮಕ್ಕಳು ನನಗೆ ಸೇರಿದವರು; ಈ ಪಶುಗಳು ನನ್ನವು. ನೀನು ಇಲ್ಲಿ ನೋಡುವ ಪ್ರತಿಯೊಂದೂ ನನಗೆ ಸೇರಿದ್ದು. ಆದರೆ ನನ್ನ ಹೆಣ್ಣುಮಕ್ಕಳನ್ನಾಗಲಿ ಅವರ ಮಕ್ಕಳನ್ನಾಗಲಿ ತೆಗೆದುಕೊಳ್ಳಲು ಸಾಧ್ಯವಿಲ್ಲ.


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ಆಮೇಲೆ ಇಸಾಕನು ದಿನ ತುಂಬಿದ ಮುದುಕನಾಗುವವರೆಗೆ ಜೀವಿಸಿ ತೀರಿಕೊಂಡನು. ಅವನ ಮಕ್ಕಳಾದ ಏಸಾವನು ಮತ್ತು ಯಾಕೋಬನು ತಮ್ಮ ಅಜ್ಜನಿಗೆ ಸಮಾಧಿಯಾಗಿದ್ದ ಸ್ಥಳದಲ್ಲೇ ತಮ್ಮ ತಂದೆಗೆ ಸಮಾಧಿ ಮಾಡಿದರು.


ಆದರೆ ಈಗ ಮಗು ಸತ್ತುಹೋಗಿದೆ. ಆದ್ದರಿಂದ ಈಗ ನಾನೇಕೆ ಉಪವಾಸಮಾಡಬೇಕು? ಆ ಮಗುವಿಗೆ ಮತ್ತೆ ನಾನು ಜೀವವನ್ನು ಕೊಡಲು ಸಾಧ್ಯವೇ? ಇಲ್ಲ! ಎಂದಾದರೂ ಒಂದು ದಿನ ನಾನು ಅವನ ಬಳಿಗೆ ಹೋಗುತ್ತೇನೆ. ಆದರೆ ಅವನು ನನ್ನ ಬಳಿಗೆ ಹಿಂದಿರುಗುವುದಿಲ್ಲ” ಎಂದನು.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ಬಳಿಕ ಇಸ್ರೇಲನು ಯೋಸೇಫನಿಗೆ, “ನಾನು ಮತ್ತೆ ನಿನ್ನ ಮುಖವನ್ನು ನೋಡುತ್ತೇನೆ ಎಂದು ಯೋಚಿಸಿರಲಿಲ್ಲ. ಆದರೆ ನಾನು ನಿನ್ನನ್ನೂ ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.


ಈ ಸುದ್ದಿಯನ್ನು ಜನರು ಯೋವಾಬನಿಗೆ ತಿಳಿಸಿದರು. ಅವರು ಯೋವಾಬನಿಗೆ, “ನೋಡು, ರಾಜನು ಅಳುತ್ತಿದ್ದಾನೆ ಮತ್ತು ಅಬ್ಷಾಲೋಮನಿಗಾಗಿ ಬಹಳ ದುಃಖಪಡುತ್ತಿದ್ದಾನೆ” ಎಂದು ಹೇಳಿದರು.


ಎಜೆರನು ಮತ್ತು ಎಲ್ಲಾದನ ತಂದೆ ಎಫ್ರಾಯೀಮನು. ತನ್ನ ಮಕ್ಕಳು ಸತ್ತದ್ದಕ್ಕಾಗಿ ಬಹಳ ದಿನಗಳ ತನಕ ಅವನು ಗೋಳಾಡಿದನು. ಅವನ ಕುಟುಂಬದವರೆಲ್ಲಾ ಬಂದು ಅವನನ್ನು ಸಂತೈಸಿದರು.


ನಾನು ದೇವರನ್ನೇ ಧ್ಯಾನಿಸುತ್ತಾ ನನ್ನ ವ್ಯಥೆಯನ್ನು ಹೇಳಿಕೊಳ್ಳಬಯಸಿದೆ. ಆದರೂ ನನ್ನಿಂದಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು