Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:4 - ಪರಿಶುದ್ದ ಬೈಬಲ್‌

4 ತಮ್ಮ ತಂದೆಗೆ ಯೋಸೇಫನ ಮೇಲೆ ಹೆಚ್ಚು ಪ್ರೀತಿಯಿರುವುದನ್ನು ಗಮನಿಸಿದ ಯೋಸೇಫನ ಅಣ್ಣಂದಿರು ಯೋಸೇಫನನ್ನು ದ್ವೇಷಿಸತೊಡಗಿ ಅವನೊಡನೆ ಸ್ನೇಹಭಾವದಿಂದ ಮಾತಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನ ಅಣ್ಣತಮ್ಮಂದಿರು - ನಮ್ಮ ತಂದೆ ತನ್ನ ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಾನೆಂದು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತಾಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತಮ್ಮ ತಂದೆಯು ಅವನನ್ನು ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿಮಾಡುತ್ತಿರುವುದನ್ನು ಅವನ ಸಹೋದರರು ಕಂಡು, ಅವನನ್ನು ದ್ವೇಷಿಸಿ, ಅವನ ಸಂಗಡ ಸಮಾಧಾನದಿಂದ ಮಾತಾಡದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:4
19 ತಿಳಿವುಗಳ ಹೋಲಿಕೆ  

ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.


“ನಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿಕೊಳ್ಳುವವನು ತನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ದ್ವೇಷಿಸಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನು ತನ್ನ ಸಹೋದರನನ್ನು ಕಣ್ಣಾರೆ ನೋಡುತ್ತಿದ್ದರೂ ಅವನನ್ನು ದ್ವೇಷಿಸುತ್ತಾನೆ. ಆದ್ದರಿಂದ ಅವನು ದೇವರನ್ನು ಪ್ರೀತಿಸಲಾಗುವುದಿಲ್ಲ. ಏಕೆಂದರೆ ಅವನು ದೇವರನ್ನು ಎಂದೂ ನೋಡಿಲ್ಲ!


ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.


ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಅಂಧಕಾರದಲ್ಲಿದ್ದಾನೆ. ಅವನು ಅಂಧಕಾರದಲ್ಲಿಯೇ ಜೀವಿಸುತ್ತಾನೆ. ಅವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದೇ ತಿಳಿದಿಲ್ಲ. ಏಕೆಂದರೆ ಅಂಧಕಾರವು ಅವನನ್ನು ಕುರುಡನನ್ನಾಗಿ ಮಾಡಿದೆ.


ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.


ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.


ಒಂದು ದಿನ ಯೋಸೇಫನು ವಿಶೇಷವಾದ ಕನಸನ್ನು ಕಂಡನು. ಯೋಸೇಫನು ಈ ಕನಸನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.


ಆದರೆ ಕಾಯಿನನ ಕಾಣಿಕೆಯನ್ನು ಸ್ವೀಕರಿಸಲಿಲ್ಲ. ಇದರಿಂದ ಕಾಯಿನನು ದುಃಖಿತನಾದನು ಮತ್ತು ಬಹಳ ಕೋಪಗೊಂಡನು.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ನನ್ನ ವೈರಿಗಳು ಚುರುಕಾಗಿಯೂ ಬಲಶಾಲಿಗಳಾಗಿಯೂ ಇದ್ದಾರೆ. ಅವರು ಎಷ್ಟೋ ಸುಳ್ಳುಗಳನ್ನು ಹೇಳಿದರು.


ಅನೇಕ ಜನರು ಅವನ ವಿರುದ್ಧವಾಗಿ ಹೋರಾಡಿದರು. ಬಿಲ್ಲುಗಳನ್ನು ಹೊಂದಿದ್ದ ಜನರು ಅವನನ್ನು ಇಷ್ಟಪಡಲಿಲ್ಲ.


ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.


ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.”


ಭೇದ ಹುಟ್ಟಿದ ಕುಟುಂಬ ಏಳಿಗೆ ಹೊಂದುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು