Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:14 - ಪರಿಶುದ್ದ ಬೈಬಲ್‌

14 ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಆಕೆ, ‘ಶೇಲಹನು ಪ್ರಾಯಸ್ಥನಾಗಿದ್ದರೂ ನನ್ನನ್ನು ಅವನಿಗೆ ಮದುವೆ ಮಾಡಿಕೊಡಲಿಲ್ಲವಲ್ಲಾ’ ಎಂದುಕೊಂಡು ತನ್ನ ವಿಧವೆ ವಸ್ತ್ರಗಳನ್ನು ತೆಗೆದಿಟ್ಟಳು. ಮುಸುಕನ್ನು ಹಾಕಿಕೊಂಡು ತನ್ನನ್ನೇ ಮರೆಸಿಕೊಂಡಳು. ತಿಮ್ನಾ ಊರಿನ ದಾರಿಯಲ್ಲಿ ಇರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲೆ ಕುಳಿತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆಕೆ - ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾವಸ್ತ್ರಗಳನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು [ವೇಶ್ಯಾಸ್ತ್ರೀಯಂತೆ] ಅಲಂಕೃತಳಾಗಿ ತಿಮ್ನಾವೂರಿನ ದಾರಿಯಲ್ಲಿರುವ ಏನಯಿಮೂರಿನ ಬಾಗಿಲ ಬಳಿಯಲ್ಲಿ ಕೂತುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು, ಮುಸುಕುಹಾಕಿ ಮುಚ್ಚಿಕೊಂಡು, ತಿಮ್ನಾ ಊರಿನ ಮಾರ್ಗದಲ್ಲಿರುವ ಏನಯಿಮೂರಿನ ಬಹಿರಂಗ ಸ್ಥಳದಲ್ಲಿ ಕೂತುಕೊಂಡಳು. ಏಕೆಂದರೆ ಶೇಲಹನು ದೊಡ್ಡವನಾಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲವೆಂದು ಹಾಗೆ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:14
9 ತಿಳಿವುಗಳ ಹೋಲಿಕೆ  

ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.


“ಯೆಹೂದವೇ, ತಲೆಯೆತ್ತಿ ಬೋಳುಗುಡ್ಡಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರೂ ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮರಿಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನ್ನು ಅಪವಿತ್ರಗೊಳಿಸಿದೆ; ಹೇಗೆಂದರೆ, ನೀನು ಅನೇಕ ಕೆಟ್ಟಕೆಲಸಗಳನ್ನು ಮಾಡಿದೆ. ನನಗೆ ವಿಶ್ವಾಸದ್ರೋಹ ಮಾಡಿದೆ.


ಅವಳು ಪ್ರತಿಯೊಂದು ಮೂಲೆಯಲ್ಲೂ ಗಂಡಸರನ್ನು ಬಲೆಗೆ ಹಾಕಿಕೊಳ್ಳಲು ಕಾದುಕೊಂಡಿರುವಳು. ಅವಳು ಬೀದಿಗಳಲ್ಲಿ ನಡೆದು ಹೋದಳು.


ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು.


ಪ್ರತೀ ರಸ್ತೆಯ ಪ್ರಾರಂಭದಲ್ಲಿ ಅಂಥಾ ಪೂಜಾಸ್ಥಳಗಳನ್ನು ನಿರ್ಮಿಸಿದ್ದೀ. ನೀನು ನಿನ್ನ ಸೌಂದರ್ಯವನ್ನು ಹಾಳುಮಾಡಿಕೊಂಡಿ. ನೀನು ಅಸಹ್ಯವಾದ ಕಾರ್ಯಗಳನ್ನು ಮಾಡಲು ನಿನ್ನ ಸೌಂದರ್ಯವನ್ನು ಬಳಸಿಕೊಂಡೆ. ಹಾದಿಯಲ್ಲಿ ಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ಲೈಂಗಿಕ ತೃಪ್ತಿ ನೀಡಿ ನಿನ್ನ ಸೂಳೆತನವನ್ನು ಹೆಚ್ಚಿಸಿಕೊಂಡೆ.


ಯೆಹೂದನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಿರಲು ಆಕೆಯನ್ನು ಕಂಡು ವೇಶ್ಯೆಯೆಂದು ಭಾವಿಸಿದನು. (ಆಕೆಯು ವೇಶ್ಯೆಯಂತೆ ಮುಸುಕು ಹಾಕಿಕೊಂಡಿದ್ದಳು.)


ಆ ಹೆಂಗಸು ಅವನನ್ನು ಎದುರುಗೊಳ್ಳಲು ಮನೆಯ ಹೊರಗಡೆ ಬಂದಳು. ಆಕೆಯ ಉಡುಪು ವ್ಯಭಿಚಾರಿಣಿಯ ಉಡುಪಿನಂತಿತ್ತು. ಅವನೊಡನೆ ಪಾಪಮಾಡಬೇಕೆಂಬ ಆಸೆ ಆಕೆಯಲ್ಲಿತ್ತು.


ತಾಮಾರಳು ಮನೆಗೆ ಹೋಗಿ ಮುಸುಕನ್ನು ತೆಗೆದುಹಾಕಿ ಮತ್ತೆ ವಿಧವಾವಸ್ತ್ರಗಳನ್ನು ಧರಿಸಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು