ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.
ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ, “ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.) ಅವಳು “ನೀನು ನನಗೆ ಏನು ಕೊಡುವೆ?” ಎಂದು ಕೇಳಿದಳು.
“ಇಬ್ಬರೂ ಒಂದೇ ದೇಹವಾಗುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.