ಆದಿಕಾಂಡ 38:20 - ಪರಿಶುದ್ದ ಬೈಬಲ್20 ಯೆಹೂದನು ಮಾತು ಕೊಟ್ಟಿದ್ದಂತೆಯೇ ಒಂದು ಆಡುಮರಿಯನ್ನು ತನ್ನ ಸ್ನೇಹಿತನಾದ ಹೀರಾನ ಮೂಲಕ ಏನಯಿಮಿಗೆ ಕಳುಹಿಸಿ ಆ ಮುದ್ರೆಯನ್ನೂ ಊರುಗೋಲನ್ನೂ ತೆಗೆದುಕೊಂಡು ಬರುವಂತೆ ಅವನಿಗೆ ತಿಳಿಸಿದನು. ಆದರೆ ಅವನು ಅವಳನ್ನು ಕಂಡುಹಿಡಿಯಲಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೊಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನಿಂದ ಬಿಡಿಸಿಕೊಳ್ಳುವ ಸಲುವಾಗಿ ತನ್ನ ಗೆಳೆಯ ಆ ಅದುಲ್ಲಾಮ್ಯನ ಸಂಗಡ ಹೋತಮರಿಯನ್ನು ಕಳಿಸಿದನು. ಆಕೆ ಅವನಿಗೆ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನಿಂದ ಬಿಡಿಸಿಕೊಳ್ಳುವದಕ್ಕೋಸ್ಕರ ತನ್ನ ಸ್ನೇಹಿತನಾದ ಆ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಲು ಆಕೆ ಅವನಿಗೆ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತೆಗೆದುಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ. ಅಧ್ಯಾಯವನ್ನು ನೋಡಿ |