ಆದಿಕಾಂಡ 38:23 - ಪರಿಶುದ್ದ ಬೈಬಲ್23 ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದಕ್ಕೆ ಯೆಹೂದನು, “ಇನ್ನು ನಾವು ಪರಿಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳಿಸಿದ್ದಾಯಿತು; ನಿನ್ನಿಂದಲು ಅವಳನ್ನು ಕಂಡುಹಿಡಿಯಲಾಗಲಿಲ್ಲ,” ಎಂದು ಸುಮ್ಮನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದಕ್ಕೆ ಯೆಹೂದನು - ಇನ್ನು ಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು; ಅವಳು ನಿನಗೆ ಸಿಕ್ಕಲಿಲ್ಲವಷ್ಟೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಅವಳು ಅದನ್ನು ತೆಗೆದುಕೊಂಡು ಹೋಗಲಿ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.