Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:24 - ಪರಿಶುದ್ದ ಬೈಬಲ್‌

24 ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನು ತನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ ಎಂಬ ವರ್ತಮಾನವನ್ನು ತಿಳಿದು - ಅವಳನ್ನು ಹೊರಗೆ ತನ್ನಿರಿ, ಸುಡಬೇಕಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:24
32 ತಿಳಿವುಗಳ ಹೋಲಿಕೆ  

“ಯಾಜಕನ ಮಗಳು ವೇಶ್ಯೆಯಾಗಿದ್ದರೆ, ಅವಳು ತನ್ನ ಗೌರವವನ್ನು ಹಾಳುಮಾಡಿಕೊಂಡವಳೂ ತನ್ನ ತಂದೆಗೆ ಅವಮಾನವನ್ನು ಉಂಟುಮಾಡಿದವಳೂ ಆಗಿದ್ದಾಳೆ. ಅವಳನ್ನು ಸುಟ್ಟುಹಾಕಬೇಕು.


ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’


ಆದರೆ ಅವರು ಒಬ್ಬ ವೇಶ್ಯೆಯ ಬಳಿಗೆ ಹೋಗುವಂತೆಯೇ ಅವರ ಬಳಿಗೆ ಹೋದರು. ಹೌದು ಒಹೊಲ ಮತ್ತು ಒಹೊಲೀಬ ಎಂಬ ಕಾಮುಕ ಸ್ತ್ರೀಯರ ಬಳಿಗೆ ಅವರು ತಿರುಗಿ ಮತ್ತೆಮತ್ತೆ ಹೋದರು.


ಮತ್ತೆಮತ್ತೆ ಒಹೊಲೀಬಳು ನನಗೆ ಅಪನಂಬಿಗಸ್ತಳಾದಳು. ಆಕೆಯು ಯುವತಿಯಾಗಿದ್ದಾಗ ಈಜಿಪ್ಟಿನಲ್ಲಿ ತಾನು ಮಾಡಿಕೊಂಡಿದ್ದ ಅನೈತಿಕ ಸಂಬಂಧಗಳನ್ನು ನೆನಪುಮಾಡಿಕೊಂಡಳು.


“ಒಹೊಲಳು ನನಗೆ ಅಪನಂಬಿಗಸ್ತಳಾದಳು. ಆಕೆ ಸೂಳೆಯಂತೆ ಜೀವಿಸತೊಡಗಿದಳು. ಆಕೆ ಪುರುಷರಿಗಾಗಿ ಆಸೆಪಟ್ಟಳು.


ಒಮ್ಮೆ ಅವಳಿಗೂ ಆ ಲೇವಿಗೂ ಜಗಳವಾಯಿತು. ಅವಳು ಅವನನ್ನು ಬಿಟ್ಟು ಯೆಹೂದದ ಬೆತ್ಲೆಹೇಮಿನಲ್ಲಿದ್ದ ತನ್ನ ತಂದೆಯ ಮನೆಗೆ ಹೋದಳು. ಅವಳು ಅಲ್ಲಿ ನಾಲ್ಕು ತಿಂಗಳು ಇದ್ದುಬಿಟ್ಟಳು.


ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು.


“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.


ಬಳಿಕ ನಾನು ಆಕೆಗೆ, “ನೀನು ನನ್ನೊಂದಿಗೆ ಅನೇಕ ದಿನಗಳವರೆಗೆ ಮನೆಯೊಳಗೆ ಇರಬೇಕು. ನೀನು ವೇಶ್ಯೆಯಂತಿರಬಾರದು. ನೀನು ಪರಪುರುಷನೊಡನೆ ಇರಬಾರದು. ನಾನೇ ನಿನ್ನ ಗಂಡನಾಗಿರುವೆನು” ಎಂದು ಹೇಳಿದೆನು.


ಬಳಿಕ, ಅನೇಕ ಸ್ತ್ರೀಯರು ನೋಡಲೆಂದು ನಿನ್ನ ಮನೆಗಳನ್ನು ಸುಟ್ಟು, ನಿನ್ನನ್ನು ದಂಡಿಸುವರು. ನೀನು ಸೂಳೆಯಂತೆ ಜೀವಿಸುವದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯತಮರಿಗೆ ಹಣ ಕೊಡುವದನ್ನು ನಿಲ್ಲಿಸುತ್ತೇನೆ.


ಆ ಬಳಿಕ ನೀನು ಅಶ್ಶೂರದವರೊಂದಿಗೆ ಸಂಭೋಗಿಸಲು ಹೋದಿ. ನೀನು ತೃಪ್ತಿಗೊಳ್ಳುವಷ್ಟು ಆನಂದ ಸಿಗಲಿಲ್ಲ. ನೀನೆಂದೂ ತೃಪ್ತಿಗೊಂಡವಳಲ್ಲ.


ದೇವರು ಹೀಗೆಂದನು: “ನೀನು ನಿನ್ನ ಸೌಂದರ್ಯದ ಮೇಲೆ ಭರವಸೆ ಉಳ್ಳವಳಾಗಿದ್ದೆ. ನಿನ್ನ ಪ್ರಖ್ಯಾತಿಯಿಂದಾಗಿ ನನಗೆ ಅಪನಂಬಿಗಸ್ತಳಾದಿ. ನಿನ್ನನ್ನು ಹಾದುಹೋಗುವ ಪ್ರತಿವ್ಯಕ್ತಿಯೊಂದಿಗೆ ನೀನು ವೇಶ್ಯೆಯಂತೆ ನಡೆದುಕೊಂಡಿ. ನೀನು ನಿನ್ನನ್ನು ಅವರಿಗೊಪ್ಪಿಸಿದಿ.


ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು.


ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.


ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿಹೋಗುವನು; ಪಾಪಿಯಾದರೋ ಅವರಿಗೆ ಸಿಕ್ಕಿಕೊಳ್ಳುವನು.


ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯ! ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನಿನ್ನನ್ನು ಇಸ್ರೇಲರ ರಾಜನನ್ನಾಗಿ ಆರಿಸಿದವನು ನಾನೇ. ಸೌಲನಿಂದ ನಿನ್ನನ್ನು ರಕ್ಷಿಸಿದವನು ನಾನೇ.


ದಾವೀದನು ಶ್ರೀಮಂತನ ಮೇಲೆ ಬಹಳ ಕೋಪಗೊಂಡನು. ಅವನು ನಾತಾನನಿಗೆ, “ಯೆಹೋವನ ಆಣೆಯಾಗಿ ಈ ಕಾರ್ಯವನ್ನು ಮಾಡಿದ ಮನುಷ್ಯನು ಸಾಯಲೇಬೇಕು!


“ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.


“ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!


ಆದರೆ ದೀನಳ ಅಣ್ಣಂದಿರು, “ನಮ್ಮ ತಂಗಿಯನ್ನು ಆ ಜನರು ಸೂಳೆಯಂತೆ ಉಪಯೋಗಿಸಿಕೊಳ್ಳಲು ನಾವು ಬಿಡಬೇಕೇ? ಇಲ್ಲ, ನಮ್ಮ ತಂಗಿಗೆ ಆ ಜನರು ಮಾಡಿದ್ದು ತಪ್ಪು” ಎಂದು ಹೇಳಿದರು.


ಆಮೇಲೆ ಅಬೀಮೆಲೆಕನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಹೀಗೇಕೆ ಮಾಡಿದೆ? ನಿನಗೆ ವಿರೋಧವಾಗಿ ನಾನೇನು ಮಾಡಿದೆ? ಆಕೆ ತಂಗಿಯಾಗಬೇಕೆಂದು ನೀನೇಕೆ ಸುಳ್ಳು ಹೇಳಿದೆ? ನೀನು ನನ್ನ ರಾಜ್ಯಕ್ಕೆ ಕೇಡನ್ನು ಬರಮಾಡಿರುವೆ. ನೀನು ಹೀಗೆ ಮಾಡಬಾರದಿತ್ತು.


ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.


ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು.


ಪ್ರತೀ ರಸ್ತೆಯ ಪ್ರಾರಂಭದಲ್ಲಿ ಅಂಥಾ ಪೂಜಾಸ್ಥಳಗಳನ್ನು ನಿರ್ಮಿಸಿದ್ದೀ. ನೀನು ನಿನ್ನ ಸೌಂದರ್ಯವನ್ನು ಹಾಳುಮಾಡಿಕೊಂಡಿ. ನೀನು ಅಸಹ್ಯವಾದ ಕಾರ್ಯಗಳನ್ನು ಮಾಡಲು ನಿನ್ನ ಸೌಂದರ್ಯವನ್ನು ಬಳಸಿಕೊಂಡೆ. ಹಾದಿಯಲ್ಲಿ ಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ಲೈಂಗಿಕ ತೃಪ್ತಿ ನೀಡಿ ನಿನ್ನ ಸೂಳೆತನವನ್ನು ಹೆಚ್ಚಿಸಿಕೊಂಡೆ.


ಬಳಿಕ ನಿನ್ನ ನೆರೆಯವರೂ ಅತೀ ಕಾಮುಕರೂ ಆಗಿದ್ದ ಈಜಿಪ್ಟಿನವರ ಬಳಿಗೆ ನೀನು ಹೋದೆ. ನನ್ನನ್ನು ಕೋಪಗೊಳಿಸುವುದಕ್ಕಾಗಿ ನೀನು ಅವರೊಂದಿಗೆ ಹಲವಾರು ಸಲ ಲೈಂಗಿಕ ಸಂಪರ್ಕ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು