ಆದಿಕಾಂಡ 38:25 - ಪರಿಶುದ್ದ ಬೈಬಲ್25 ಆ ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ಈ ವಸ್ತುಗಳ ಒಡೆಯ. ಈ ವಸ್ತುಗಳನ್ನು ನೋಡು! ಇವು ಯಾರವು? ಈ ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು” ಎಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅಂತೆಯೇ ಎಳೆದು ತರುವಾಗ ಆಕೆ ತನ್ನ ಮಾವನಿಗೆ ಒತ್ತೆಯ ವಸ್ತುಗಳನ್ನು ಕಳುಹಿಸುತ್ತಾ, “ಇವು ಯಾವನವೊ ಅವನಿಂದಲೇ ನಾನು ಗರ್ಭಿಣಿಯಾದುದು; ಮುದ್ರೆಯುಂಗುರ, ಅದರ ದಾರ ಮತ್ತು ಕೈಗೋಲು ಇವುಗಳನ್ನು ಗುರುತಿಸಿ ತಿಳಿದುಕೊಳ್ಳಬಹುದು,” ಎಂದು ಹೇಳಿಕಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು ಆಕೆಯನ್ನು ಹೊರಕ್ಕೆ ತಂದಾಗ ಆಕೆ ತನ್ನ ಮಾವನಿಗೆ ಆ ಒತ್ತೆಯ ಸಾಮಾನುಗಳನ್ನು ಕಳುಹಿಸಿ - ಇವು ಯಾವನವೋ ಆ ಮನುಷ್ಯನಿಂದಲೇ ನಾನು ಬಸುರಾಗಿದ್ದೇನೆ; ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು ಎಂದು ಹೇಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಕೆಯನ್ನು ಹೊರಗೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಒತ್ತೆಯ ಸಾಮಾನುಗಳನ್ನು ಕೊಟ್ಟ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದ್ದರಿಂದ ಈ ಮುದ್ರೆಯೂ ದಾರವೂ ಕೋಲೂ ಯಾರವೆಂದು ತಿಳಿದುಕೋ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |