Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:26 - ಪರಿಶುದ್ದ ಬೈಬಲ್‌

26 ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೆಹೂದನು ಅವುಗಳ ಗುರುತುಹಚ್ಚಿದನು. “ನಾನು ನನ್ನ ಮಗ ಶೇಲಹನನ್ನು ಆಕೆಗೆ ಮದುವೆ ಮಾಡದೆಹೋದೆ. ಈ ಕಾರಣ ನನಗಿಂತ ಆಕೆಯೇ ನೀತಿವಂತಳು,” ಎಂದುಕೊಂಡನು. ಇದಾದ ಬಳಿಕ ಅವನು ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೂದನು ಅವುಗಳ ಗುರುತನ್ನು ತಿಳಿದು - ನಾನು ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆಮಾಡಿಸಲಿಲ್ಲವಾದ್ದರಿಂದ ಆಕೆ ನನಗಿಂತಲೂ ನ್ಯಾಯವಾಗಿ ನಡೆದಳು ಎಂದು ಹೇಳಿದನು. ಅವನು ತಿರಿಗಿ ಆಕೆಯ ಸಹವಾಸ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಯೆಹೂದನು ಅವುಗಳನ್ನು ಗುರುತಿಸಿ, “ಆಕೆಯು ನನಗಿಂತ ನೀತಿವಂತಳು, ಏಕೆಂದರೆ ನಾನು ನನ್ನ ಮಗ ಶೇಲಹನಿಗೆ ಅವಳನ್ನು ಕೊಡಲಿಲ್ಲ,” ಎಂದನು. ಅವನು ಮತ್ತೆ ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:26
19 ತಿಳಿವುಗಳ ಹೋಲಿಕೆ  

ಸೌಲನು, “ನೀನೇ ನೀತಿವಂತನು. ನಾನು ತಪ್ಪು ಮಾಡಿದೆ. ನೀನು ನನಗೆ ಒಳ್ಳೆಯವನಾಗಿದ್ದೆ; ಆದರೆ ನಾನು ನಿನಗೆ ಕೆಟ್ಟವನಾದೆ.


ಯೇಸುವಿನ ಈ ಮಾತನ್ನು ಕೇಳಿದ ಆ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಆ ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು.


“ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.


ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?


ಆದ್ದರಿಂದ ನಿನ್ನ ಅವಮಾನವನ್ನು ನೀನು ಸಹಿಸಿಕೊಳ್ಳಬೇಕು. ನಿನಗಿಂತ ನಿನ್ನ ಸಹೋದರಿಯರು ನೀತಿವಂತರಂತೆ ತೋರುತ್ತಾರೆ. ಯಾಕೆಂದರೆ ನಿನ್ನ ಪಾಪಗಳು ಬಹಳ ಅಸಹ್ಯವಾಗಿದ್ದವು. ಆದ್ದರಿಂದ ನಿನಗೆ ಅವಮಾನವಾಗಲೇಬೇಕು; ನೀನು ನಾಚಿಕೆಯನ್ನು ಅನುಭವಿಸಲೇಬೇಕು ಯಾಕೆಂದರೆ ನೀನು ನಿನ್ನ ಸಹೋದರಿಯರನ್ನು ನಿರಪರಾಧಿಗಳಾಗಿ ಕಾಣುವಂತೆ ಮಾಡಿರುವೆ.”


ನಾನು ಒಂದು ಸಲ ಮಾತಾಡಿದ್ದೇನೆ; ಆದರೆ ಪ್ರತಿವಾದ ಮಾಡಲಾರೆನು. ನಾನು ಎರಡು ಸಲ ಮಾತಾಡಿದ್ದೇನೆ; ಆದರೆ ನಾನು ಹೆಚ್ಚಿಗೆ ಏನೂ ಹೇಳಲಾರೆನು” ಅಂದನು.


ಈಗಲಾದರೋ ನಿನಗೆ ಕೇಡು ಬಂದಿದೆ; ಆದ್ದರಿಂದ ನೀನು ನಿರಾಶನಾಗಿರುವೆ. ಕೇಡು ನಿನಗೆ ಬಡಿದಿರುವುದರಿಂದ ಭ್ರಮೆಗೊಂಡಿರುವೆ.


ಜನರನ್ನು ಕೊಂದ ದೂತನನ್ನು ದಾವೀದನು ನೋಡಿ ಯೆಹೋವನೊಂದಿಗೆ ಮಾತನಾಡಿದನು. ದಾವೀದನು ಯೆಹೋವನಿಗೆ, “ನಾನು ಪಾಪ ಮಾಡಿದೆನು. ನಾನು ತಪ್ಪು ಮಾಡಿದೆನು. ಆದರೆ ಈ ಜನರು ಕೇವಲ ಕುರಿಗಳಂತೆ ನಿರಪರಾಧಿಗಳು. ಅವರು ಯಾವ ತಪ್ಪನ್ನೂ ಮಾಡಲಿಲ್ಲ. ದಯಮಾಡಿ ನಿನ್ನ ದಂಡನೆಯು ನನಗೆ ಮತ್ತು ನನ್ನ ತಂದೆಯ ಕುಲದ ವಿರುದ್ಧವಾಗಿರಲಿ” ಎಂದು ಹೇಳಿದನು.


ದಾವೀದನು ಜೆರುಸಲೇಮಿನ ತನ್ನ ಅರಮನೆಗೆ ಬಂದನು. ದಾವೀದನು ಮನೆಕಾಯಲು ಬಿಟ್ಟುಹೋದ ತನ್ನ ಹತ್ತುಮಂದಿ ಉಪಪತ್ನಿಯರನ್ನು ಒಂದು ಮನೆಯಲ್ಲಿ ಇಟ್ಟಿದ್ದನು. ಈ ಮನೆಯನ್ನು ಕಾವಲುಗಾರರು ಕಾಯುತ್ತಿದ್ದರು. ಈ ಹೆಂಗಸರು ತಾವು ಸಾಯುವವರೆಗೆ ಈ ಮನೆಯಲ್ಲಿಯೇ ನೆಲೆಸಿದ್ದರು. ದಾವೀದನು ಅವರಿಗೆ ಆಹಾರ ವಸ್ತ್ರಗಳನ್ನು ಕೊಟ್ಟನು. ಆದರೆ ಅವನು ಅವರೊಂದಿಗೆ ಮಲಗಿಕೊಳ್ಳಲಿಲ್ಲ. ಅವರು ಸಾಯುವವರೆಗೆ ವಿಧವೆಯರಂತಿದ್ದರು.


ಆಗ ಅವರು ಅಬ್ಷಾಲೋಮನಿಗಾಗಿ ಮನೆಯ ಮಾಳಿಗೆಯ ಮೇಲೆ ಒಂದು ಗುಡಾರವನ್ನು ಹಾಕಿದರು. ಅಬ್ಷಾಲೋಮನು ತನ್ನ ತಂದೆಯ ಪತ್ನಿಯರೊಡನೆ ಮಲಗಿಕೊಂಡನು. ಇಸ್ರೇಲರೆಲ್ಲ ಇದನ್ನು ನೋಡಿದರು.


ತಾಮಾರಳು ಯಾವಾಗಲೂ ವಿಧವೆಯ ವಸ್ತ್ರಗಳನ್ನು ಧರಿಸಿಕೊಂಡಿರುತ್ತಿದ್ದಳು. ಆದರೆ ಈಗ ಆಕೆ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ತನ್ನ ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡು ತಿಮ್ನಾ ಊರಿನ ಸಮೀಪದಲ್ಲಿರುವ ಏನಯಿಮೂರಿನ ದಾರಿಯಲ್ಲಿ ಕುಳಿತುಕೊಂಡಳು. ಯೆಹೂದನ ಚಿಕ್ಕಮಗನಾದ ಶೇಲಹನು ಬೆಳೆದು ದೊಡ್ಡವನಾಗಿರುವುದು ತಾಮಾರಳಿಗೆ ತಿಳಿದಿತ್ತು. ಆದರೆ ಆಕೆಗೆ ಅವನನ್ನು ಮದುವೆ ಮಾಡಿಸಲು ಯೆಹೂದನು ಆಲೋಚಿಸಿರಲಿಲ್ಲ.


ತಂದೆಯು ಆ ನಿಲುವಂಗಿಯನ್ನು ನೋಡಿ ಅದನ್ನು ಗುರುತಿಸಿ, “ಹೌದು, ಇದು ಯೋಸೇಫನದೇ. ಯಾವುದೋ ಕ್ರೂರ ಪ್ರಾಣಿಯ ಬಾಯಿಗೆ ತುತ್ತಾದನು” ಎಂದು ಹೇಳಿ


ಆದಾಮ ಮತ್ತು ಹವ್ವಳು ಕೂಡಿದರು. ಆದ್ದರಿಂದ ಹವ್ವಳಿಗೆ ಒಂದು ಮಗು ಜನಿಸಿತು. ಹವ್ವಳು, “ಯೆಹೋವನ ಸಹಾಯದಿಂದ ಗಂಡುಮಗುವನ್ನು ಪಡೆದಿದ್ದೇನೆ” ಎಂದು ಹೇಳಿ ಆ ಮಗುವಿಗೆ ಕಾಯಿನ ಎಂದು ಹೆಸರಿಟ್ಟಳು.


ನೀನು ನನಗೆ ಮಾಡಿದ ಒಳ್ಳೆಯ ಕಾರ್ಯಗಳ ಬಗ್ಗೆ ನನಗೆ ತಿಳಿಸಿರುವೆ. ಯೆಹೋವನು ನನ್ನನ್ನು ನಿನ್ನ ಬಳಿಗೆ ಕರೆದು ತಂದನು, ಆದರೆ ನೀನು ನನ್ನನ್ನು ಕೊಲ್ಲಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು