Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:28 - ಪರಿಶುದ್ದ ಬೈಬಲ್‌

28 ಆಕೆಗೆ ಹೆರಿಗೆಯಾಗುವಾಗ ಒಂದು ಮಗು ತನ್ನ ಕೈಚಾಚಿತು. ದಾದಿಯು ಆ ಮಗುವಿನ ಕೈಗೆ ಕೆಂಪುದಾರವನ್ನು ಕಟ್ಟಿ, “ಮೊದಲನೆಯವನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, “ಇದು ಮೊದಲು ಹೊರಗೆ ಬಂದದ್ದು” ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಕೆ ಹೆರುವಾಗ ಒಂದು ಮಗು ಕೈಚಾಚಿತು. ಸೂಲಗಿತ್ತಿ, “ಇದು ಮೊದಲು ಬಂದದ್ದು,” ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಕೆ ಹೆರುವಾಗ ಒಂದು ಮಗುವು ಕೈಚಾಚಲು ಸೂಲಗಿತ್ತಿಯು - ಇದು ಮೊದಲಾಗಿ ಬಂದದ್ದು ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು. ಅದು ಕೈಯನ್ನು ಹಿಂದಕ್ಕೆ ತೆಗೆಯಲು ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಕೆಯು ಹೆರುವಾಗ ಒಂದು ಮಗುವು ತನ್ನ ಕೈಚಾಚಿತು. ಆಗ ಸೂಲಗಿತ್ತಿಯು, “ಇದು ಮೊದಲು ಬಂದದ್ದು,” ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:28
3 ತಿಳಿವುಗಳ ಹೋಲಿಕೆ  

ತಾಮಾರಳಿಗೆ ಹೆರಿಗೆಕಾಲ ಬಂತು. ಆಕೆಗೆ ಅವಳಿಜವಳಿ ಮಕ್ಕಳಾಗುವುದನ್ನು ದಾದಿಯು ಗಮನಿಸಿದಳು.


ಆದರೆ ಆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಛೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಆ ಮಗುವಿಗೆ “ಪೆರೆಚ್” ಎಂದು ಹೆಸರಿಟ್ಟರು.


ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು