Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:7 - ಪರಿಶುದ್ದ ಬೈಬಲ್‌

7 ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಯೆಹೂದನ ಈ ಹಿರಿಯ ಮಗ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟವನಾಗಿದ್ದನು. ಆದ್ದರಿಂದ ಸರ್ವೇಶ್ವರ ಅವನನ್ನು ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಯೆಹೂದನ ಚೊಚ್ಚಲಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:7
11 ತಿಳಿವುಗಳ ಹೋಲಿಕೆ  

ಯೆಹೂದನ ಗಂಡುಮಕ್ಕಳು ಯಾರೆಂದರೆ: ಏರ್, ಓನಾನ್ ಮತ್ತು ಶೆಲಾಹ. ಬತ್ಷೂವಳು ಇವರ ತಾಯಿ. ಈಕೆ ಕಾನಾನ್ಯಳು. ಯೆಹೂದನ ಚೊಚ್ಚಲ ಮಗ ಏರ್. ಯೆಹೋವನ ದೃಷ್ಟಿಯಲ್ಲಿ ಇವನು ಕೆಟ್ಟವನಾಗಿದ್ದ ಕಾರಣ ಕೊಲ್ಲಲ್ಪಟ್ಟನು.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್ ಮತ್ತು ಜೆರಹ. (ಏರ್ ಮತ್ತು ಓನಾನ್ ಕಾನಾನಿನಲ್ಲಿ ಇರುವಾಗಲೇ ಸತ್ತುಹೋದರು.) ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್.


ಯೆಹೂದ ಕುಲದ ಕುಟುಂಬಗಳು: ಶೇಲಹನ ಕುಟುಂಬದವರಾದ ಶೇಲಾನ್ಯರು; ಪೆರೆಚನ ಕುಟುಂಬದವರಾದ ಪೆರೆಚ್ಯರು; ಜೆರಹನ ಕುಟುಂಬದವರಾದ ಜೆರಹಿಯರು. (ಯೆಹೂದನ ಇಬ್ಬರು ಗಂಡುಮಕ್ಕಳಾದ ಏರ್ ಮತ್ತು ಓನಾನನು ಕಾನಾನ್‌ನಲ್ಲಿ ಸತ್ತರು.)


ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.


ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.


ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ಆದರೆ ಯೆಹೋವನಿಗೆ ಮೆಚ್ಚಿಕೆಯಾಗುವಂತೆ ನಡೆದುಕೊಂಡ ಒಬ್ಬ ಮನುಷ್ಯನಿದ್ದನು. ಅವನೇ ನೋಹ.


ಯೆಹೂದನು ತನ್ನ ಮೊದಲನೆ ಮಗನಾದ ಏರನಿಗಾಗಿ ಒಬ್ಬ ಕನ್ನಿಕೆಯನ್ನು ಆಯ್ಕೆಮಾಡಿದನು. ಆಕೆಯ ಹೆಸರು ತಾಮಾರ.


ಒಬ್ಬ ಮನುಷ್ಯನು ಬೇರೊಬ್ಬನ ವಿರುದ್ಧ ಅಪರಾಧ ಮಾಡಿದರೆ, ಯೆಹೋವನು ಅವನಿಗೆ ಸಹಾಯ ಮಾಡಬಹುದು, ಆದರೆ ಒಬ್ಬ ಮನುಷ್ಯನು ಯೆಹೋವನ ವಿರುದ್ಧವೇ ಅಪರಾಧ ಮಾಡಿದರೆ, ಆಗ ಅವನಿಗೆ ಸಹಾಯ ಮಾಡುವವರು ಯಾರು?” ಎಂದು ಬುದ್ಧಿಮಾತು ಹೇಳಿದನು. ಆದರೆ ಏಲಿಯ ಮಾತನ್ನು ಅವನ ಮಕ್ಕಳು ಕೇಳಲಿಲ್ಲ. ಆದ್ದರಿಂದ ಯೆಹೋವನು ಏಲಿಯ ಮಕ್ಕಳನ್ನು ಕೊಲ್ಲಲು ನಿರ್ಧರಿಸಿದನು.


ನಂತರ ಎಲೀಯನು, “ನನ್ನ ದೇವರಾದ ಯೆಹೋವನೇ, ಈ ವಿಧವೆಯು ತನ್ನ ಮನೆಯಲ್ಲಿ ನನಗೆ ಸ್ಥಳವನ್ನು ಕೊಟ್ಟಿದ್ದಾಳೆ. ನೀನು ಅವಳಿಗೆ ಈ ಕೇಡನ್ನು ಮಾಡುವೆಯಾ? ನೀನು ಅವಳ ಮಗುವನ್ನು ಸಾಯಿಸುವೆಯಾ?” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು