ಆದಿಕಾಂಡ 38:8 - ಪರಿಶುದ್ದ ಬೈಬಲ್8 ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅತ್ತಿಗೆಯನ್ನು ಮದುವೆ ಮಾಡಿಕೊಂಡು ಮೈದುನ ಧರ್ಮಕ್ಕನುಸಾರ ನಿನ್ನ ಅಣ್ಣನಿಗೆ ಸಂತತಿಯನ್ನು ಹುಟ್ಟಿಸು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬಳಿಕ ಯೆಹೂದನು ಓನಾನನಿಗೆ - ನೀನು ನಿನ್ನ ಅತ್ತಿಗೆಯನ್ನು ಮದುವೆ ಮಾಡಿಕೊಂಡು ಮೈದುನಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಹುಟ್ಟಿಸು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಯೆಹೂದನು ಓನಾನನಿಗೆ, “ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ, ಅವಳನ್ನು ಮದುವೆಯಾಗಿ, ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡು,” ಎಂದನು. ಅಧ್ಯಾಯವನ್ನು ನೋಡಿ |