Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:20 - ಪರಿಶುದ್ದ ಬೈಬಲ್‌

20 ರಾಜನ ವೈರಿಗಳನ್ನು ಹಾಕುವ ಒಂದು ಸೆರೆಮನೆಯಿತ್ತು. ಆದ್ದರಿಂದ ಪೋಟೀಫರನು ಯೋಸೇಫನನ್ನು ಆ ಸೆರೆಮನೆಗೆ ಹಾಕಿಸಿದನು. ಅಂದಿನಿಂದ ಯೋಸೇಫನು ಅಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನನ್ನು ಬಂಧಿಸಿದ. ರಾಜಖೈದಿಗಳನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಅವನನ್ನು ಹಾಕಿಸಿದ. ಜೋಸೆಫನು ಸೆರೆಯಲ್ಲಿ ಇರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನನ್ನು ಹಿಡಿಸಿ ಅರಸನು ಸೆರೆಯವರನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೋಸೇಫನ ಯಜಮಾನನು ಅವನನ್ನು ಹಿಡಿದುಕೊಂಡು, ರಾಜನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:20
11 ತಿಳಿವುಗಳ ಹೋಲಿಕೆ  

ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.


ಒಬ್ಬನು ಅನ್ಯಾಯವಾಗಿ ಸಂಕಟಕ್ಕೆ ಒಳಗಾದಾಗ ದೇವರಿಗಾಗಿ ಅದನ್ನು ಸಹಿಸಿಕೊಂಡರೆ ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.


ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.


ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.


ಆ ಅಧಿಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಬೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೆಂಬುವನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದದ ರಾಜನ ಲಿಫಿಗಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು