ಆದಿಕಾಂಡ 39:5 - ಪರಿಶುದ್ದ ಬೈಬಲ್5 ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ ಆಸ್ತಿಯ ಮೇಲೆಯೂ ಅಧ್ಯಕ್ಷನಾಗಿ ಇಟ್ಟಂದಿನಿಂದ ಯೆಹೋವನು ಯೋಸೇಫನ ನಿವಿುತ್ತವಾಗಿ ಆ ಐಗುಪ್ತ್ಯನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನನ್ನು ಮನೆಯಲ್ಲಿಯೂ, ತನಗಿದ್ದ ಎಲ್ಲದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಯೆಹೋವ ದೇವರು ಆ ಈಜಿಪ್ಟಿನವನ ಮನೆಯನ್ನು ಯೋಸೇಫನಿಗಾಗಿ ಆಶೀರ್ವದಿಸಿದರು. ಮನೆಯಲ್ಲಿಯೂ ಹೊಲದಲ್ಲಿಯೂ ಅವನಿಗಿದ್ದ ಎಲ್ಲದರ ಮೇಲೆಯೂ ಯೆಹೋವ ದೇವರ ಆಶೀರ್ವಾದವಿತ್ತು. ಅಧ್ಯಾಯವನ್ನು ನೋಡಿ |