Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:9 - ಪರಿಶುದ್ದ ಬೈಬಲ್‌

9 ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:9
34 ತಿಳಿವುಗಳ ಹೋಲಿಕೆ  

ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ, “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.


ದೇವರಿಂದ ಹೊಸದಾಗಿ ಹುಟ್ಟಿದವನು ಪಾಪಗಳಲ್ಲಿ ನೆಲೆಗೊಂಡಿರುವುದಿಲ್ಲ. ಏಕೆಂದರೆ ದೇವರು ದಯಪಾಲಿಸಿದ ಹೊಸ ಜೀವವು ಅವನಲ್ಲಿ ನೆಲೆಸಿರುತ್ತದೆ. ಅವನು ದೇವರಿಂದ ಹೊಸದಾಗಿ ಹುಟ್ಟಿದ ಕಾರಣ ಪಾಪದಲ್ಲೇ ಮುಂದುವರಿಯಲು ಅವನಿಗೆ ಸಾಧ್ಯವಿಲ್ಲ.


ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”


ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.


ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು.


ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.


ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.’”


ನಾನು ಆ ಕೆಟ್ಟಕಾರ್ಯಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಯಾಕೆಂದರೆ ನಾನು ದೇವರ ಶಿಕ್ಷೆಗೆ ಹೆದರಿಕೊಂಡಿದ್ದೆ. ಆತನ ವೈಭವದ ಎದುರಿನಲ್ಲಿ ನಿಂತುಕೊಳ್ಳಲು ನನಗಾಗಲಿಲ್ಲ.


ಅವಳು ತನ್ನ ಶೋಕಕಾಲವನ್ನು ಮುಗಿಸಿದ ನಂತರ, ಅವಳನ್ನು ತನ್ನ ಮನೆಗೆ ಕರೆತರಲು ದಾವೀದನು ಸೇವಕರನ್ನು ಕಳುಹಿಸಿದನು. ಅವಳು ದಾವೀದನ ಪತ್ನಿಯಾದಳು. ಅವಳು ದಾವೀದನಿಂದ ಒಂದು ಗಂಡುಮಗುವಿಗೆ ಜನ್ಮನೀಡಿದಳು. ದಾವೀದನು ಮಾಡಿದ ಈ ಕೆಟ್ಟಕಾರ್ಯವು ಯೆಹೋವನಿಗೆ ದುಃಖವನ್ನುಂಟುಮಾಡಿತು.


ಆದರೆ ನೀವು ಈ ಸಂಗತಿಗಳನ್ನು ಮಾಡದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.


“ಯಾವನಾದರೂ ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ತನ್ನ ಬಳಿಯಲ್ಲಿ ಅಡವು ಇಟ್ಟ ವಸ್ತುವಿನ ವಿಷಯದಲ್ಲಾಗಲಿ ತಾನು ಮಾಡಿದ ಕಳುವಿನ ವಿಷಯದಲ್ಲಾಗಲಿ ಸುಳ್ಳಾಡುವುದರಿಂದಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದಾಗಲಿ


ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ಅವರು ವಸ್ತುಗಳನ್ನು ಕದಿಯಬಾರದು; ಮತ್ತು ತಾವು ನಂಬಿಗಸ್ತರೆಂಬುದನ್ನು ತೋರಿಸಿಕೊಡಬೇಕು. ಗುಲಾಮರು ಹೀಗೆ ನಡೆದುಕೊಳ್ಳುವುದಾದರೆ, ಅವರು ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ನಮ್ಮ ರಕ್ಷಕನಾದ ದೇವರ ಉಪದೇಶವು ಶ್ರೇಷ್ಠವಾದದ್ದೆಂದು ತೋರ್ಪಡಿಸಲು ಸಾಧ್ಯವಾಗುತ್ತದೆ.


ಬೇರೊಬ್ಬನ ಹೆಂಡತಿಯೊಡನೆ ಮಲಗಿಕೊಳ್ಳುವವನಿಗೆ ಇದೇ ರೀತಿಯಾಗುವುದು. ಅವನು ದಂಡನೆ ಅನುಭವಿಸುವನು.


ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು.


“ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!


ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಆ ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರಮಾಣಮಾಡು.


ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.


ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.


ಆಮೇಲೆ ಅಬೀಮೆಲೆಕನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಹೀಗೇಕೆ ಮಾಡಿದೆ? ನಿನಗೆ ವಿರೋಧವಾಗಿ ನಾನೇನು ಮಾಡಿದೆ? ಆಕೆ ತಂಗಿಯಾಗಬೇಕೆಂದು ನೀನೇಕೆ ಸುಳ್ಳು ಹೇಳಿದೆ? ನೀನು ನನ್ನ ರಾಜ್ಯಕ್ಕೆ ಕೇಡನ್ನು ಬರಮಾಡಿರುವೆ. ನೀನು ಹೀಗೆ ಮಾಡಬಾರದಿತ್ತು.


ಆ ಸ್ತ್ರೀಯು ಪ್ರತಿದಿನವೂ ಯೋಸೇಫನನ್ನು ಒತ್ತಾಯಿಸಿದಳು. ಆದರೆ ಯೋಸೇಫನು ಆಕೆಯೊಂದಿಗೆ ಮಲಗಿಕೊಳ್ಳಲು ಒಪ್ಪಲಿಲ್ಲ.


“ನೀವು ವ್ಯಭಿಚಾರ ಮಾಡಬಾರದು.


ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿಹೋಗುವನು; ಪಾಪಿಯಾದರೋ ಅವರಿಗೆ ಸಿಕ್ಕಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು