Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:10 - ಪರಿಶುದ್ದ ಬೈಬಲ್‌

10 ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:10
24 ತಿಳಿವುಗಳ ಹೋಲಿಕೆ  

ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.


ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.


“ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.


“ಭೂಮಿಯೇ, ನನಗಾಗಿರುವ ಕೆಡುಕುಗಳನ್ನು ಮರೆಮಾಡಬೇಡ. ನ್ಯಾಯಕ್ಕಾಗಿ ನಾನಿಡುವ ಮೊರೆ ನಿಂತುಹೋಗಲು ಅವಕಾಶ ಕೊಡಬೇಡ.


ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!


ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.


ಸಾಯುತ್ತಿರುವ ಜನರ ನರಳಾಟವು ಪಟ್ಟಣದಲ್ಲಿ ಕೇಳಿಬರುತ್ತಿದೆ. ಗಾಯಗೊಂಡಿರುವವರು ಸಹಾಯಕ್ಕಾಗಿ ಮೊರೆಯಿಡುತ್ತಿದ್ದಾರೆ, ಆದರೆ ದೇವರು ಕೇಳಿಸಿಕೊಳ್ಳುವುದಿಲ್ಲ.


ಯೆಹೋವನು, ‘ನೀನು ನಿನ್ನೆ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ಯಾವ ಹೊಲದಲ್ಲಿ ಸುರಿಸಿದೆಯೋ ಅದೇ ಹೊಲದಲ್ಲಿ ನಿನಗೆ ಮುಯ್ಯಿ ತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುವುದಲ್ಲವೇ? ಯೆಹೋವನ ಮಾತು ನೆರವೇರುವಂತೆ ಯೋರಾಮನ ದೇಹವನ್ನು ತೆಗೆದು ಅದೇ ಹೊಲದಲ್ಲಿ ಎಸೆದುಬಿಡು!” ಎಂದು ಹೇಳಿದನು.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ಆತನಿಗೆ ಸ್ತೋತ್ರಸಲ್ಲಿಸು. ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು; ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು.


ಇದಲ್ಲದೆ ಯೆಹೋವನು, “ಸೊದೋಮ್ ಮತ್ತು ಗೊಮೋರಗಳ ಜನರು ಬಹಳ ಕೆಟ್ಟವರೆಂದು ಅನೇಕ ಸಲ ಕೇಳಿದ್ದೇನೆ.


ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು. ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಆ ಹಣ್ಣನ್ನು ತಿಂದೆ” ಅಂದಳು.


ಪೇತ್ರನು ಆಕೆಗೆ, “ನೀನು ಮತ್ತು ನಿನ್ನ ಗಂಡನು ಪ್ರಭುವಿನ ಆತ್ಮನನ್ನು ಪರೀಕ್ಷಿಸಲು ಒಪ್ಪಿಕೊಂಡಿದ್ದೇಕೆ? ಅಗೋ, ನಿನ್ನ ಗಂಡನನ್ನು ಹೂಳಿಟ್ಟ ಜನರು ಬಾಗಿಲ ಬಳಿಗೆ ಬಂದಿದ್ದಾರೆ! ಅವರು ನಿನ್ನನ್ನೂ ಅದೇರೀತಿ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.


ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ,


ಸಮುವೇಲನು, “ನೀನು ಮಾಡಿದ್ದೇನು?” ಎಂದು ಕೇಳಿದನು. ಸೌಲನು, “ಸೈನಿಕರು ನನ್ನನ್ನು ಬಿಟ್ಟುಹೋಗುತ್ತಿರುವುದನ್ನೂ ನೀನು ನಿಯಮಿತಕಾಲದಲ್ಲಿ ಇಲ್ಲಿ ಇಲ್ಲದಿರುವುದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಒಟ್ಟುಗೂಡುತ್ತಿರುವುದನ್ನೂ ನೋಡಿದೆನು.


ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.


“ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು