Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:13 - ಪರಿಶುದ್ದ ಬೈಬಲ್‌

13 ಅದಕ್ಕೆ ಕಾಯಿನನು ಯೆಹೋವನಿಗೆ, “ಈ ಶಿಕ್ಷೆಯನ್ನು ನಾನು ಸಹಿಸಲಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಕಾಯಿನನು, “ಸರ್ವೇಶ್ವರಾ, ಈ ಶಿಕ್ಷೆ ನನ್ನಿಂದ ಸಹಿಸಲಾಗದಷ್ಟು ಕಠಿಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಾಯಿನನು ಯೆಹೋವನಿಗೆ - ನನ್ನ ಅಪರಾಧಫಲ ತಾಳಕೂಡದಷ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಕಾಯಿನನು ಯೆಹೋವ ದೇವರಿಗೆ, “ನನ್ನ ಶಿಕ್ಷೆಯು ತಾಳಲಾರದಷ್ಟು ದೊಡ್ಡದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:13
7 ತಿಳಿವುಗಳ ಹೋಲಿಕೆ  

ದುಷ್ಟನಿಗೆ ಕತ್ತಲೆಯಿಂದ ಪಾರಾಗುತ್ತೇನೆ ಎಂಬ ನಿರೀಕ್ಷೆಯೇ ಇಲ್ಲ. ಅವನನ್ನು ಕೊಲ್ಲಲು ಕತ್ತಿಯು ಎಲ್ಲೋ ಕಾದುಕೊಂಡಿದೆ.


ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.


ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.


ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.


ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.


ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಈಗ ನೀನು ಮಾಡಿದ ಭಯಂಕರ ಕೃತ್ಯಗಳ ಸಲುವಾಗಿ ಶಿಕ್ಷೆ ಅನುಭವಿಸಲೇಬೇಕು.” ಇದು ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು