Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:14 - ಪರಿಶುದ್ದ ಬೈಬಲ್‌

14 ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಹೊರಡಿಸುತ್ತೀಯಲ್ಲಾ; ನಿನ್ನ ಸಾನ್ನಿಧ್ಯವು ತಪ್ಪಿತು; ನಾನು ಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಬೇಕಾಯಿತು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:14
27 ತಿಳಿವುಗಳ ಹೋಲಿಕೆ  

ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ. ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡು ಮಾಡಬೇಡ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


“ಆ ಜನಾಂಗದವರೊಂದಿಗೆ ಜೀವಿಸುವಾಗ ನಿಮಗೆ ಸಮಾಧಾನವಿರುವುದಿಲ್ಲ; ನಿಮಗೆ ವಿಶ್ರಾಂತಿ ಇರುವುದಿಲ್ಲ. ನಿಮ್ಮ ಯೆಹೋವನು ನಿಮಗೆ ಚಿಂತೆಬೇಸರಗಳನ್ನು ತಂದು ತುಂಬಿಸುವನು. ನಿಮ್ಮ ಕಣ್ಣುಗಳು ಆಯಾಸದಿಂದ ತುಂಬಿರುವವು; ನೀವು ಕಳವಳದಿಂದಿರುವಿರಿ.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿದ ದೂರ ಎಸೆದುಬಿಟ್ಟನು. ಚಿದ್ಕೀಯನು ಬಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು.


ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ, ಅವನು ನರಹತ್ಯ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತನಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಆದ್ದರಿಂದ ಆ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆಹೋಗುವ ಹೊಗೆಯಂತಿದ್ದಾರೆ.


ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ಅವನಿಗೆ ಯಾರೂ ಕೃಪೆತೋರದಿರಲಿ; ಅವನ ಮಕ್ಕಳಿಗೂ ಯಾರೂ ಕರುಣೆತೋರದಿರಲಿ.


ಅವನ ಮಕ್ಕಳು ತಮ್ಮ ಮನೆಯನ್ನು ಕಳೆದುಕೊಂಡು ತಿರುಕರಂತೆ ಅಲೆಯುತ್ತಾ ಭಿಕ್ಷುಕರಾಗಲಿ.


ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.


ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.


ಅದಕ್ಕೆ ಕಾಯಿನನು ಯೆಹೋವನಿಗೆ, “ಈ ಶಿಕ್ಷೆಯನ್ನು ನಾನು ಸಹಿಸಲಾರೆ!


ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು