ಆದಿಕಾಂಡ 4:15 - ಪರಿಶುದ್ದ ಬೈಬಲ್15 ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,"ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದಕ್ಕೆ ಯೆಹೋವನು - ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವದು ಎಂದು ಹೇಳಿ ಅವನನ್ನು ಕಂಡವರು ಕೊಲ್ಲಕೂಡದಂತೆ ಅವನ ಮೇಲೆ ಒಂದು ಗುರುತಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು. ಅಧ್ಯಾಯವನ್ನು ನೋಡಿ |
ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.