ಆದಿಕಾಂಡ 4:16 - ಪರಿಶುದ್ದ ಬೈಬಲ್16 ಕಾಯಿನನು ಯೆಹೋವನ ಪ್ರಸನ್ನತೆಯಿಂದ ದೂರ ಹೊರಟುಹೋದನು. ಕಾಯಿನನು ನೋದು ಎಂಬ ನಾಡಿನಲ್ಲಿ ವಾಸಿಸಿದನು. ಅದು ಏದೆನ್ ತೋಟಕ್ಕೆ ಪೂರ್ವದಲ್ಲಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕಾಯಿನನು ಸರ್ವೇಶ್ವರ ಸ್ವಾಮಿಯ ಸಾನ್ನಿಧ್ಯದಿಂದ ಹೊರಟುಹೋಗಿ ಏದೆನ್ ನಾಡಿಗೆ ಪೂರ್ವಕ್ಕಿರುವ “ಅಲೆನಾಡು" ಎಂಬ ನಾಡಿನಲ್ಲಿ ವಾಸಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕಾಯಿನನು ಯೆಹೋವನ ಸನ್ನಿಧಾನದಿಂದ ಹೊರಟು ನೋದು ಎಂಬ ದೇಶದಲ್ಲಿ ವಾಸಿಸಿದನು; ಅದು ಏದೆನ್ ಸೀಮೆಗೆ ಮೂಡಲಲ್ಲಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಕಾಯಿನನು ಯೆಹೋವ ದೇವರ ಸನ್ನಿಧಿಯಿಂದ ಹೊರಟುಹೋಗಿ, ಏದೆನ್ ಸೀಮೆಗೆ ಪೂರ್ವದಲ್ಲಿದ್ದ ನೋದು ಎಂಬ ದೇಶದಲ್ಲಿ ವಾಸಿಸಿದನು. ಅಧ್ಯಾಯವನ್ನು ನೋಡಿ |