Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:17 - ಪರಿಶುದ್ದ ಬೈಬಲ್‌

17 ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡುಮಗು ಹುಟ್ಟಿತು. ಅವರು ಆ ಮಗುವಿಗೆ ಹನೋಕ ಎಂದು ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಆ ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕಾಯಿನನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ತಾನು ಕಟ್ಟಿದ ಊರಿಗೆ ಕಾಯಿನನು ‘ಹನೋಕ’ ಎಂದು ತನ್ನ ಮಗನ ಹೆಸರನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕಾಯಿನನು ತನ್ನ ಹೆಂಡತಿಯನ್ನು ಕೂಡಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ ಎಂದು ತನ್ನ ಮಗನ ಹೆಸರಿಟ್ಟನು. ಹನೋಕನಿಂದ ಈರಾದನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕಾಯಿನನು ತನ್ನ ಹೆಂಡತಿಯನ್ನು ಕೂಡಲು, ಅವಳು ಗರ್ಭಿಣಿಯಾಗಿ ಹನೋಕನನ್ನು ಪಡೆದಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ, ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:17
11 ತಿಳಿವುಗಳ ಹೋಲಿಕೆ  

ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ. ಅವರೆಷ್ಟೇ ಭೂ ಆಸ್ತಿಯನ್ನು ಹೊಂದಿದ್ದರೂ ಅದರಿಂದೇನೂ ಪ್ರಯೋಜನವಿಲ್ಲ.


ಅಬ್ಷಾಲೋಮನು ಬದುಕಿದ್ದಾಗ, ರಾಜನ ಕಣಿವೆಯಲ್ಲಿ ಒಂದು ಸ್ತಂಭವನ್ನು ನೆಡಿಸಿದ್ದನು. ಅಬ್ಷಾಲೋಮನು, “ನನ್ನ ಹೆಸರನ್ನು ಜೀವಂತವಾಗಿರಿಸಲು ನನಗೆ ಗಂಡುಮಕ್ಕಳಿಲ್ಲ” ಎಂದು ಹೇಳಿ ಆ ಸ್ತಂಭಕ್ಕೆ ತನ್ನ ಹೆಸರನ್ನೇ ಕೊಟ್ಟಿದ್ದನು. ಆ ಸ್ತಂಭವನ್ನು “ಅಬ್ಷಾಲೋಮನ ಸ್ಮಾರಕಸ್ತಂಭ” ಎಂದು ಇಂದಿಗೂ ಕರೆಯುತ್ತಾರೆ.


ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.


ಯೆರೆದನು 162 ವರ್ಷದವನಾದಾಗ ಹನೋಕ ಎಂಬ ಮಗನನ್ನು ಪಡೆದನು.


ಕಾಯಿನನು ಯೆಹೋವನ ಪ್ರಸನ್ನತೆಯಿಂದ ದೂರ ಹೊರಟುಹೋದನು. ಕಾಯಿನನು ನೋದು ಎಂಬ ನಾಡಿನಲ್ಲಿ ವಾಸಿಸಿದನು. ಅದು ಏದೆನ್ ತೋಟಕ್ಕೆ ಪೂರ್ವದಲ್ಲಿರುವುದು.


ಹನೋಕನು ಈರಾದ್ ಎಂಬ ಮಗನನ್ನು ಪಡೆದನು. ಈರಾದನು ಮೆಹೂಯಾಯೇಲ ಎಂಬ ಮಗನನ್ನು ಪಡೆದನು. ಮೆಹೂಯಾಯೇಲನು ಮೆತೂಷಾಯೇಲ ಎಂಬ ಮಗನನ್ನು ಪಡೆದನು. ಮೆತೂಷಾಯೇಲನು ಲೆಮೆಕ ಎಂಬ ಮಗನನ್ನು ಪಡೆದನು.


ಜನರು ಐಶ್ವರ್ಯವಂತರಾಗಿದ್ದರೂ ಭೂಲೋಕದಲ್ಲಿ ಶಾಶ್ವತವಾಗಿ ಇರಲಾಗದು. ಎಲ್ಲರೂ ಪ್ರಾಣಿಗಳಂತೆಯೇ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು