Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:22 - ಪರಿಶುದ್ದ ಬೈಬಲ್‌

22 ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಚಿಲ್ಲಾ ಎಂಬುವಳು ತೂಬಲ್ ಕಾಯಿನನಿಗೆ ಜನ್ಮವಿತ್ತಳು. ಇವನು ಕಬ್ಬಿಣ, ಹಿತ್ತಾಳೆ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಚಿಲ್ಲಾ ಎಂಬವಳು ತೂಬಲ್‍ಕಾಯಿನನನ್ನು ಹೆತ್ತಳು; ಅವನು ಕುಲಿಮೆ ಮಾಡಿ ಕಬ್ಬಿಣ ತಾಮ್ರದ ಆಯುಧಗಳನ್ನು ಕಲ್ಪಿಸಿದವನು. ತೂಬಲ್‍ಕಾಯಿನನ ತಂಗಿ ನಯಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಚಿಲ್ಲಾ ತೂಬಲ್ ಕಾಯಿನನನ್ನು ಪಡೆದಳು. ಅವನು ಕಂಚು ಮತ್ತು ಕಬ್ಬಿಣದ ಆಯುಧಗಳನ್ನು ಮಾಡುವವನಾಗಿದ್ದನು. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:22
7 ತಿಳಿವುಗಳ ಹೋಲಿಕೆ  

“ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಗಳಲ್ಲಿ ಪಳಗಿರುವ ಒಬ್ಬ ಕುಶಲಕರ್ಮಿಯನ್ನು ನೀನು ಕಳುಹಿಸಿಕೊಡಬೇಕು. ಅವನಿಗೆ ನೀಲಿ, ಕೆಂಪು, ನೇರಳೆ ವರ್ಣಗಳ ಬಟ್ಟೆಗಳನ್ನು ನೇಯುವುದೂ ಗೊತ್ತಿರಬೇಕು. ನನ್ನ ತಂದೆ ಆರಿಸಿಕೊಂಡಿರುವ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಜೆರುಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಕೆಲಸ ಮಾಡಬೇಕು.


ನಿನ್ನ ಬಾಗಿಲುಗಳಲ್ಲಿ ಬೀಗವಿರುವುದು. ಅವು ಕಬ್ಬಿಣದಿಂದಲೂ ಹಿತ್ತಾಳೆಯಿಂದಲೂ ಮಾಡಲ್ಪಟ್ಟಿವೆ. ನಿನ್ನ ಜೀವಮಾನ ಕಾಲವೆಲ್ಲಾ ನೀನು ಬಲಶಾಲಿಯಾಗಿರುವೆ.”


ಅಲ್ಲಿ ನೀವು ಯಥೇಚ್ಛವಾಗಿ ತಿನ್ನುವಿರಿ. ನಿಮಗೆ ಬೇಕಾದದ್ದೆಲ್ಲಾ ನಿಮಗಿರುವುದು. ಅಲ್ಲಿಯ ಕಲ್ಲುಗಳು ಕಬ್ಬಿಣದಂತಿವೆ. ಬೆಟ್ಟಗಳಿಂದ ನೀವು ತಾಮ್ರವನ್ನು ಅಗೆದು ತೆಗೆಯುವಿರಿ.


ಬೆಂಕಿಯನ್ನು ಸಹಿಸಬಲ್ಲ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿಯಲ್ಲಿ ಹಾಯಿಸಿ ಶುದ್ಧಮಾಡಬೇಕು. ಬಳಿಕ ಶುದ್ಧೀಕರಣದ ನೀರಿನಿಂದ ಅವುಗಳನ್ನು ಶುದ್ಧೀಕರಿಸಬೇಕು. ಬೆಂಕಿಯನ್ನು ಸಹಿಸಲಾರದ ವಸ್ತುಗಳನ್ನು ನೀರಿನಿಂದ ಮಾತ್ರ ತೊಳೆಯಬೇಕು.


ಜನರಿಂದ ನೀನು ಸ್ವೀಕರಿಸಬೇಕಾದ ವಸ್ತುಗಳ ಪಟ್ಟಿ ಇಲ್ಲಿದೆ: ಚಿನ್ನ, ಬೆಳ್ಳಿ, ತಾಮ್ರ,


ಆದಳಿಗೆ ಮತ್ತೊಬ್ಬ ಮಗ ಹುಟ್ಟಿದನು. ಅವನೇ ಯೂಬಾಲ. ಕಿನ್ನರಿಕೊಳಲುಗಳನ್ನು ನುಡಿಸುವ ಜನರಿಗೆ ಯೂಬಾಲನೇ ಮೂಲಪಿತೃ.


ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು