Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:4 - ಪರಿಶುದ್ದ ಬೈಬಲ್‌

4 ಹೇಬೆಲನು ತನ್ನ ಕುರಿಮಂದೆಯಿಂದ ಒಳ್ಳೆಯ ಚೊಚ್ಚಲ ಕುರಿಗಳನ್ನು ಮತ್ತು ಅವುಗಳ ಒಳ್ಳೆಯ ಕೊಬ್ಬಿದ ಭಾಗಗಳನ್ನು ತಂದನು. ಯೆಹೋವನು ಹೇಬೆಲನ ಕಾಣಿಕೆಯನ್ನು ಸ್ವೀಕರಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂತೆಯೇ, ಹೇಬೆಲನು ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೇಬೆಲನು ಸಹ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನೂ ಅವುಗಳ ಕೊಬ್ಬನ್ನೂ ತಂದನು. ಯೆಹೋವ ದೇವರು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:4
22 ತಿಳಿವುಗಳ ಹೋಲಿಕೆ  

ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ನಿನಗೆ ಬರುವ ಆದಾಯದಿಂದಲೂ ಬೆಳೆಯ ಪ್ರಥಮ ಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ನೀವು ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಆತನಿಗಾಗಿ ಮೀಸಲಿಡಬೇಕು.


“ಆದರೆ ಚೊಚ್ಚಲು ಆಕಳಿಗಾಗಲಿ ಕುರಿಗಾಗಲಿ ಆಡಿಗಾಗಲಿ ಈಡನ್ನು ಕೊಡಕೂಡದು. ಆ ಪಶುಗಳು ಪವಿತ್ರವಾಗಿವೆ. ಅವುಗಳ ರಕ್ತವನ್ನು ವೇದಿಕೆಯ ಮೇಲೆ ಚೆಲ್ಲಿ ಅವುಗಳ ಕೊಬ್ಬನ್ನು ಯೆಹೋವನಿಗೆ ಮೆಚ್ಚಿಗೆಕರವಾದ ಸುಗಂಧ ವಾಸನೆಯ ತ್ಯಾಗಮಯವಾದ ಕಾಣಿಕೆಯನ್ನಾಗಿ ಹೋಮಮಾಡಿರಿ.


ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.


ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಸರ್ವಾಂಗಹೋಮಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು. ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು.


ಅಲ್ಲಿ ದೇವರನ್ನು ಆರಾಧಿಸಲು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ದಾವೀದನು ಅದರ ಮೇಲೆ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿದನು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಪರಲೋಕದಿಂದ ಬೆಂಕಿಯನ್ನು ಕಳುಹಿಸುವುದರ ಮೂಲಕ ದಾವೀದನಿಗೆ ಉತ್ತರಿಸಿದನು. ಸರ್ವಾಂಗಹೋಮಗಳ ಯಜ್ಞವೇದಿಕೆಯ ಮೇಲೆ ಬೆಂಕಿಯು ಇಳಿದುಬಂದಿತು.


ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಸೂರ್ಯನು ಮುಳುಗಿದ ಮೇಲೆ ತುಂಬ ಕತ್ತಲಾಯಿತು. ಕಡಿದುಹಾಕಿದ್ದ ಪ್ರತಿಯೊಂದು ಪ್ರಾಣಿಗಳ ದೇಹದ ಎರಡೆರಡು ಹೋಳುಗಳು ಇನ್ನೂ ನೆಲದ ಮೇಲೆ ಇದ್ದವು. ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಹೊಗೆ ಮತ್ತು ಬೆಂಕಿಗಳಿಂದ ಕೂಡಿದ ದೀವಿಟಿಗೆಯು ಈ ತುಂಡುಗಳ ನಡುವೆ ಹಾದುಹೋಯಿತು.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಯೆಹೋವನ ದೂತನ ಕೈಯಲ್ಲಿ ಒಂದು ಕೋಲಿತ್ತು. ಯೆಹೋವನ ದೂತನು ತನ್ನ ಕೋಲಿನ ತುದಿಯಿಂದ ಮಾಂಸವನ್ನು ಮತ್ತು ರೊಟ್ಟಿಯನ್ನು ಮುಟ್ಟಿದನು. ಆಗ ಆ ಕಲ್ಲಿನಿಂದ ಬೆಂಕಿಯ ಜ್ವಾಲೆಯು ಎದ್ದಿತು! ಮಾಂಸ ಮತ್ತು ರೊಟ್ಟಿ ಸಂಪೂರ್ಣವಾಗಿ ಸುಟ್ಟುಹೋದವು! ಆಮೇಲೆ ಯೆಹೋವನ ದೂತನು ಅದೃಶ್ಯನಾದನು.


“ಇದಲ್ಲದೆ, ಇಸ್ರೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲದ ಪದಾರ್ಥಗಳಲ್ಲಿ ಅಂದರೆ ಉತ್ತಮವಾದ ಎಣ್ಣೆ, ಹೊಸ ದ್ರಾಕ್ಷಾರಸ, ಧಾನ್ಯ ಇವುಗಳನ್ನೆಲ್ಲ ನಾನು ನಿಮಗೆ ಕೊಡುತ್ತೇನೆ.


ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಬಾಳನ ಪ್ರವಾದಿಗಳಾದ ನೀವು ನಿಮ್ಮ ದೇವರನ್ನು ಪ್ರಾರ್ಥಿಸಿ. ನಾನು ಯೆಹೋವನನ್ನು ಪ್ರಾರ್ಥಿಸುತ್ತೇನೆ. ನಮ್ಮಲ್ಲಿ ಯಾರ ಪ್ರಾರ್ಥನೆಗೆ ಉತ್ತರವಾಗಿ ದೇವರು ಸೌದೆಯನ್ನು ಉರಿಯುವಂತೆ ಮಾಡುತ್ತಾನೋ ಆತನೇ ನಿಜವಾದ ದೇವರು” ಎಂದು ಹೇಳಿದನು. ಜನರೆಲ್ಲರೂ ಇದು ಒಳ್ಳೆಯ ಆಲೋಚನೆಯೆಂದು ಒಪ್ಪಿಕೊಂಡರು.


ಸ್ವಲ್ಪ ಕಾಲದ ನಂತರ ಕಾಯಿನನು ದೇವರಿಗೆ ಕೃತಜ್ಞತಾ ಕಾಣಿಕೆಯನ್ನು ತಂದನು. ಕಾಯಿನನು ತಾನು ಹೊಲದಲ್ಲಿ ಬೆಳೆದ ಕೆಲವು ಆಹಾರಪದಾರ್ಥಗಳನ್ನು ತಂದನು.


ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.


ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು